Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ
ಚಿತ್ರದುರ್ಗ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 3, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

* ಕಣ್ಮನ ಸೆಳೆದ ದೇವಿಯರ ಅಲಂಕಾರ * ಹರಕೆ ಸಲ್ಲಿಸಿದ ಭಕ್ತರು * ಮಜ್ಜಿಗೆ ಪಾನಕ ವಿತರಣೆ

ಚಿತ್ರದುರ್ಗ : ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಏಕನಾಥೇಶ್ವರಿ ಹಾಗೂ ಬರಗೇರಮ್ಮನವರ ಮೆರವಣಿಗೆ ವೈಭವೋಪೇತವಾಗಿ ನಡೆಯಿತು.

 

ಕೋಟೆ ರಸ್ತೆಯಲ್ಲಿರುವ ಪಾದಗುಡಿ ಮುಂಭಾಗದಲ್ಲಿ ತಹಶೀಲ್ದಾರ್ ಮೆರವಣಿಗೆ ಉದ್ಘಾಟಿಸಿದರು.

 

ಡೊಳ್ಳು, ತಮಟೆ, ವಿವಿಧ ಕಲಾ ತಂಡಗಳೊಂದಿಗೆ ಸಾಗಿದ ಮೆರವಣಿಗೆ ಆನೆಬಾಗಿಲು, ಬುರುಜನಹಟ್ಟಿ, ಸಿಹಿನೀರು ಹೊಂಡದ ರಸ್ತೆ, ಸಿದ್ದರಾಮೇಶ್ವರ ಸರ್ಕಲ್, ಗಾಯತ್ರಿ ಭವನ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆಯಲ್ಲಿ ಸಂಚರಿಸಿತು.

ಜೋಡೆತ್ತಿನ ಬಂಡಿಯಲ್ಲಿ ಏಕನಾಥೇಶ್ವರಿಯನ್ನು ವಿವಿಧ ಬಗೆಯ ಬೃಹಧಾಕಾರವಾದ ಹಾರ ಹಾಗೂ ಬಣ್ಣ ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು. ರಸ್ತೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಏಕನಾಥೇಶ್ವರಿ ಅಮ್ಮನಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

 

ಉರಿ ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಹೊರಟವರಿಗೆ ಭಕ್ತರು ತಮ್ಮ ಮನೆಗಳ ಮುಂದೆ ತಂಪಾದ ಪಾನೀಯ ಹಾಗೂ ಮಜ್ಜಿಗೆಯನ್ನು ವಿತರಿಸಿದರು.

 

ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ಶುಕ್ರವಾರ ನಗರದ ರಾಜಬೀದಿಗಳಲ್ಲಿ ಸಾಗಿತು. ಜೋಡೆತ್ತಿನ ಗಾಡಿಯಲ್ಲಿ ವಿರಾಜಮಾನಳಾಗಿದ್ದ ಬರಗೇರಮ್ಮನನ್ನು ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣ ದೊಡ್ಡ ಗಾತ್ರದ ಹೂವಿನ ಹಾರಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು.

 

ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತದ ಮೂಲಕ ಲಕ್ಷ್ಮಿಬಜಾರ್‍ನಿಂದ ಪ್ರಮುಖ ಬೀದಿಗಳಲ್ಲಿ ಹೊರಟ ಬರಗೇರಮ್ಮನಿಗೆ ರಸ್ತೆಯ ಬದಿಗಳಲ್ಲಿ ನಿಂತಿದ್ದ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

 

ಡೊಳ್ಳು, ತಮಟೆ, ಚಂಡೆವಾದ್ಯ, ಗೊಂಬೆ ಕುಣಿತ, ಸೋಮನ ಕುಣಿತ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.

 

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಮಾಜಿ ಸದಸ್ಯ ಗಾಡಿ ಮಂಜ, ಮೃತ್ಯುಂಜಯ, ಕುಮಾರಸ್ವಾಮಿ, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್, ಮಾಜಿ ನಾಮ ನಿರ್ದೇಶಿತ ಸದಸ್ಯ ಓಂಕಾರ್ ಇನ್ನು ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಏಕನಾಥೇಶ್ವರಿ
Follow on Facebook Follow on Instagram
Share. Facebook Twitter WhatsApp Telegram
Previous Articleಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ
Next Article ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

April 3, 2026

ಗರ್ಭಕಂಠದ ಕ್ಯಾನ್ಸರ್ ತಡೆಗೆ ‘ಹೆಚ್‍ಪಿವಿ’ ಲಸಿಕೆ ಶ್ರೀರಕ್ಷೆ

April 3, 2026

ಮುರುಘಾ ಮಠದಲ್ಲಿ ಅಕ್ಕಮಹಾದೇವಿ ಶರಣೋತ್ಸವ; ಸ್ತ್ರೀಕುಲದ ಅಸ್ಮಿತೆ ಅಕ್ಕ

April 3, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.