ಚಿತ್ರದುರ್ಗ : ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಜಾತ್ಯಾತೀತ ಜನತಾದಳದಿಂದ ಸೋಮವಾರ ಪ್ರತಿಭಟನೆ
ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವವೃತ್ತದಲ್ಲಿಮಾನವ ಸರಪಳಿ ನಿರ್ಮಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹಮದ್ ವಿರುದ್ದಧಿಕ್ಕಾರಗಳನ್ನುಕೂಗಿದರು.ಜೆಡಿಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ವಸತಿ ಸಚಿವ ಜಮೀರ್ ಅಹಮದ್ಮನೆಗಳನ್ನುನೀಡಲು ಬಡವರಿಂದ ಲಂಚ ಪಡೆದಿದ್ದಾರೆಂದು ಅವರ ಪಕ್ಷದ ಶಾಸಕರುಗಳೆ ಆದ ಪಾಟೀಲ್, ರಾಜು ಕಾಗೆ ಆಪಾದಿಸುತ್ತಿದ್ದಾರೆ.
ಬಿಟ್ಟಿಭಾಗ್ಯಗಳನ್ನು ನೀಡಿ ರಾಜ್ಯದ ಜನತೆಯನ್ನು ಮರಳು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಭಿವೃದ್ದಿಕುಂಠಿತಗೊಂಡಿದೆ. ಕೂಡಲೆ ಸಚಿವ ಜಮೀರ್ ಅಹಮದ್‍ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಮಾಜಿ ಪ್ರಧಾನಿಹೆಚ್.ಡಿ.ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಹೆಸರಿಗೆ ಮಸಿ ಬಳಿಯುವ ಕೆಲಸಮಾಡುವುದು ಬೇಡಎಂದು ಆಗ್ರಹಿಸಿದರು.ಜೆಡಿಎಸ್. ಮಾಜಿ ಅಧ್ಯಕ್ಷ ಡಿ.ಯಶೋಧರ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರ್ಷಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಯನ್ನು ಉಚಿತ ಭಾಗ್ಯಗಳ ಭ್ರಮೆಯಲ್ಲಿ ತೇಲಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ದಿನಿಗಮದ ಹಣವನ್ನು ಲೂಟಿ ಹೊಡೆಯಲಾಗಿದೆ.
ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗೆ ಅಧಿಕಾರದಲ್ಲಿಮುಂದುವರೆಯುವ ನೈತಿಕತೆಯಿಲ್ಲ. ಕೂಡಲೆ ರಾಜಿನಾಮೆ ನೀಡುವುದರ ಜೊತೆಗೆ ವಸತಿ ಜಮೀರ್ ಅಹಮದ್‍ರವನ್ನು ಸಚಿವಸ್ಥಾನದಿಂದ ಉಚ್ಚಾಟಿಸಬೇಕು. ಕಾಂಗ್ರೆಸ್‍ನಲ್ಲಿ ಗುಂಪುಗಾರಿಕೆ ಶುರವಾಗಿದೆ ಎಂದರು.ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿಕೊಂಡಿದೆವಸತಿಇಲಾಖೆಯಲ್ಲಿಬ್ರಹ್ಮಾಂಡಭ್ರಷ್ಠಾಚಾರವಾಗಿರುವುದನ್ನುಸಂಪೂರ್ಣತನಿಖೆಗೊಳಪಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ರಾಜ್ಯದಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು
ಹಿರಿಯೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ ಮಾತನಾಡಿ ರಾಜ್ಯದ ಜನ ಯಾರು ಉಚಿತ ಭಾಗ್ಯಗಳನ್ನುಕೇಳಿಲ್ಲ. ಸಿದ್ದರಾಮಯ್ಯ ಪಂಚ ಗ್ಯಾರೆಂಟಿಗಳನ್ನು ಘೋಷಿಸಿ ಜನತೆಯನ್ನು ಸೋಮಾರಿಗಳನ್ನಾಗಿ ಮಾಡಿದ್ದಾರೆ. ವಸತಿ ಸಚಿವಜಮೀರ್ ಅಹಮದ್‍ರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.
ಜೆಡಿಎಸ್.ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ
ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಟಿ.ತಿಪ್ಪೇಸ್ವಾಮಿ,ಹಿರಿಯೂರು ತಾಲ್ಲೂಕು ಅಧ್ಯಕ್ಷ ಹನುಮಂತರಾಯಪ್ಪ,
ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಪರಮೇಶ್ವರಪ್ಪ, ಹೊಸದುರ್ಗ ತಾಲ್ಲೂಕುಅಧ್ಯಕ್ಷ ಗಣೇಶ್‍ಮೂರ್ತಿ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ವೀರಭದ್ರಣ್ಣ, ಶಿವಶಂಕರ್, ನಗರಸಭೆ ಸದಸ್ಯರುಗಳಾದ ಸೈಯದ್ನಸ್ರುಲ್ಲಾ, ದೀಪಕ್, ಮಾಜಿ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್.ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



