ಕೆಲಸ ಇಲ್ಲ ಸಿಗ್ತಾ ಇಲ್ಲ ಅಂತ ಮನೇಲಿ ಕೂತಿದ್ದೀರಾ …ಇಲ್ಲಿದೆ ಬಂಪರ್ ಆಫರ್
ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಐಡಿಎಸ್‍ಜಿ ಕಾಲೇಜು ಸಹಭಾಗಿತ್ವದಲ್ಲಿ ಮಾರ್ಚ್ 23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಐಡಿಎಸ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಒಂದೇ ಸೂರಿನಡಿ 80ಕ್ಕೂ ಅಧಿಕ ಕಂಪನಿಗಳು, 5000 ಕ್ಕೂ ಹೆಚ್ಚು ಉದ್ಯೋಗ ಅವಕಾಶವಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವೀಧರರು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಉದ್ಯೋಗಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ.
ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿ ಕಡ್ಡಾಯವಾಗಿ ಹಾಜರಾಗಿ ಮಾರ್ಚ್-2026ರ ಮಾಹೆಯ ಸ್ವಯಂ ಘೋಷಣೆಯನ್ನು ಸ್ಥಳದಲ್ಲಿ ಮಾಡಲಾಗುವುದು
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರ (ದೂರವಾಣಿ ಸಂಖ್ಯೆ: 08262-295538/9945198500/9964851195) ವನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
