ಚಿತ್ರದುರ್ಗ ಜೂನ್ 05 : ವಿಶ್ವ ಪರಿಸರ ದಿನಾಚರಣೆಯಂದು ಮಾತ್ರ ಪರಿಸರದ ಬಗ್ಗೆ ಕಾಳಜಿ ತೋರಿದರೆ ಸಾಲದು. ಪ್ರತಿ ದಿನವೂ ಪರಿಸರ ಪ್ರಜ್ಞೆ ಹೊಂದುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಹೇಳಿದರು.
ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ರಕ್ಷಣೆ ಕೇವಲ ಅರಣ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಕೆಲಸವಲ್ಲ. ಅದು ಪ್ರತಿಯೊಬ್ಬರ ಕೆಲಸ ಮತ್ತು ಜವಾಬ್ದಾರಿಯಾಗಿದ್ದು, ಪರಿಸರ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರು ತಮ್ಮ ಜನ್ಮ ದಿನಾಚರಣೆ ಅಂಗವಾಗಿ ಕನಿಷ್ಟ ಒಂದು ಗಿಡ ನೆಡುವ ಮೂಲಕ ಪರಿಸರಕ್ಕೆ ಕಾಣಿಕೆ ನೀಡಬೇಕು ಎಂದು ಸಲಹೆ ನೀಡಿದರು.
ಜೂನ್ 05, 1973ರಲ್ಲಿ ಪ್ರಪ್ರಥಮವಾಗಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಪ್ರಸ್ತುತ 53ನೇ ವರ್ಷದ ವಿಶ್ವ ಪರಿಸರ ದಿನ ಆಚರಣೆ ಮಾಡಲಾಗುತ್ತಿದೆ. ಪರಿಸರ ನಾಶದಿಂದಾಗಿ ಮಾನವನ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ಪರಿಸರ ಮಹತ್ವವ ಸಾರುವ ನಿಟ್ಟಿನಲ್ಲಿ ವಿಶ್ವದಾದ್ಯಂತ ಪರಿಸರ ದಿನ ಆಚರಿಸಲಾಗುತ್ತಿದೆ. ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಈ ಬಾರಿ ವಿಶ್ವ ಪರಿಸರ ದಿನಾಚರಣೆ ಘೋಷವಾಕ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಪರಿಸರ ಉಳಿಸಲು ಪ್ರಯತ್ನ ಮಾಡೋಣ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈಗಾಗಲೇ ಪ್ರತಿ ತಾಲ್ಲೂಕಿಗೆ 10 ಸಾವಿರ ಗಿಡಗಳನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರಿಸರ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಸಹಯೋಗದೊಂದಿಗೆ ಸಸಿಗಳನ್ನು ನೆಡಲಿದ್ದಾರೆ ಎಂದು ತಿಳಿಸಿದ ಅವರು, ಹೆಚ್ಚು ಹೆಚ್ಚು ಗಿಡಗಳನ್ನು ನೆಡುವ ಮೂಲಕ ಸುಂದರ ಪರಿಸರ ನಿರ್ಮಿಸಿ, ಮುಂದಿನ ಪೀಳಿಗೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಎ.ಎಂ. ಚೈತ್ರ, 2ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಉಜ್ವಲ ವೀರಣ್ಣ ಸಿದ್ದಣ್ಣನವರ್, 1ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಪೂಜಾ ಬೆಳಕೇರಿ, 2ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನಿಖಿತ ಎಸ್ ಅಕ್ಕಿ, 3ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಆರ್ ಸಹನಾ, ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಬಿ.ಟಿ.ತಿಪ್ಪೇರುದ್ರಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಆರ್‍ಎಫ್‍ಓ ವಸಂತ್, ಕಾಲೇಜಿನ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ವಿ.ಪ್ರಸಾದ್, ಬಿ.ಕೆ. ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



