ಬಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1 , ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.ಆಸ್ಟ್ರೇಲಿಯಾ (Australia) ಮತ್ತು ನ್ಯೂಜಿಲೆಂಡ್ನಲ್ಲಿನ ವೀಕ್ಷಕರಿಗಾಗಿ ಈ ಚಿತ್ರವನ್ನು ಡ್ರೀಮ್ ಸ್ಕ್ರೀನ್ಸ್ ಇಂಟರ್ನ್ಯಾಷನಲ್ ವಿತರಿಸಲಿದ್ದು, ಅಲ್ಲಿನ ಸಿನಿಪ್ರಿಯರು ಈ ದೈವಿಕ ಕಥೆಯನ್ನು ದೊಡ್ಡ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜಾಗತಿಕವಾಗಿ ಮೆಚ್ಚುಗೆ ಗಳಿಸಿದ್ದ ಕಾಂತಾರ (2022) ಚಿತ್ರದ ಪ್ರಿಕ್ವೆಲ್ ಆಗಿರುವ ಈ ಸಿನಿಮಾ, ನಮ್ಮ ಸಂಸ್ಕೃತಿ, ಜಾನಪದ ಮತ್ತು ಆಧ್ಯಾತ್ಮಿಕತೆಯ ಬೇರುಗಳನ್ನು ಮತ್ತಷ್ಟು ಆಳವಾಗಿ ಪರಿಚಯಿಸಲಿದೆ.ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರವು ಭಾರತೀಯ ಹಾಗೂ ಜಾಗತಿಕ ಸಿನಿಪ್ರಿಯರಿಗೆ ಒಂದು ಅದ್ಭುತ ಅನುಭವ ನೀಡಲಿದೆ. ಕಾಲಾತೀತ ಕಥೆಗಳನ್ನು ಸೃಷ್ಟಿಸುವ ಹೊಂಬಾಳೆ ಫಿಲ್ಮ್ಸ್ನ ದೂರದೃಷ್ಟಿಯ ಭಾಗವಾಗಿರುವ ಕಾಂತಾರ ಚಾಪ್ಟರ್ 1, ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







