2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







