ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ-1 ಸಿನಿಮಾ ಎಲ್ಲೆಡೆ ಭರಪೂರ ಪ್ರದರ್ಶನ ಕಾಣುತ್ತಿದೆ. ಎಲ್ಲಾ ಕಡೆ ಚಿತ್ರದ ಟಿಕೆಟ್ ಸೋಲ್ಡ್ ಔಟ್ ಆಗಿವೆ. ಶನಿವಾರ, ಭಾನುವಾರ ವೀಕೆಂಡ್ ಆಗಿರೋ ಕಾರಣ ಹೌಸ್ ಫುಲ್ ಪ್ರದರ್ಶನಕ್ಕೆ ಕಾಂತಾರ ಸಜ್ಜಾಗಿದೆ.
ಹೊಂಬಾಳೆ ಫಿಲ್ಮ್ಸ್ವನಿಂದ ನಿರ್ಮಾಣಗೊಂಡಿರುವ ಈ ಚಿತ್ರ ಈಗಾಗಲೇ ಬಾಕ್ಸ್ ಆಫೀಸ್ನಲ್ಲಿ ತನ್ನ ವಿಜಯೋತ್ಸವವನ್ನು ಪ್ರಾರಂಭಿಸಿದ್ದು ಬಿಡುಗಡೆಯಾದ ಎರಡೇ ದಿನಗಳಲ್ಲಿ 100 ಕೋಟಿ ಕ್ಲಬ್ ಗೆ ಸೇರಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ವಾರಾಂತ್ಯದ ಜನದಟ್ಟಣೆ ಕಲೆಕ್ಷನ್ಗಳನ್ನು ಇನ್ನಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.
ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರೊಂದಿಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್ ಮತ್ತು ಪ್ರಕಾಶ್ ತುಮಿನಾಡು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಏಳು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರದ ವ್ಯಾಪ್ತಿಯು ಕರ್ನಾಟಕವನ್ನು ಮೀರಿ ವಿಸ್ತರಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







