ನಟ ರಿಷಭ್ ಶೆಟ್ಟಿ ನಿರ್ದೇಶಿಸಿ ಅಭಿನಯಸಿರುವ ‘ಕಾಂತಾರ-1’ ಸಿನಿಮಾ ಅಬ್ಬರ ಸೃಷ್ಟಿಸಿದೆ. 30 ದೇಶಗಳ 7000 ಥೇಟರುಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆಯಾಗಿದೆ. ರುಕ್ಮಿಣಿ ವಸಂತ್ ನಾಯಕಿಯಾಗಿ ಅಭಿನಯಿಸಿದ್ದು, ಕನ್ನಡದ ಯಾವ ಸಿನಿಮಾವು ಈ ಮಟ್ಟದ ಅಬ್ಬರ ಸೃಷ್ಟಿಸಿರಲಿಲ್ಲ ಎಂಬುದು ಗಮನಾರ್ಹ. ಉಳಿದಂತೆ 34 ನಿಮಿಷಗಳಲ್ಲೇ 10 ಸಾವಿರ ಟಿಕೆಟ್ ಬುಕ್ ಆಗಿವೆ ಎಂಬುದು ಗಮನಿಸಬೇಕಾದ ಸಂಗತಿ. ಇಷ್ಟೊಂದು ಭರದಲ್ಲಿ ಟಿಕೆಟ್ ಬಿಕರಿಯಾದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೂ ಕಾಂತಾರ-1 ಭಾಜನವಾಗಿದೆ. 1200ರೂವರೆಗೂ ಟಿಕೆಟ್ ಮಾರಾಟವಾಗಿರುವ ಸಂಗತಿ ಕಾಂತಾರ ಕ್ರೇಜ್ ಎಷ್ಟಿದೆ ಎಂಬುದನ್ನು ತಿಳಿಸುತ್ತದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







