ಹಸಿದವರ ಹೊಟ್ಟೆ ತುಂಬಿಸಿದ ಸಿದ್ದು ನನ್ನ ರಾಮ: ಪ್ರದೀಪ್ ಈಶ್ವರ್
ವಿಧಾನಸಭೆ ಬಡವರ, ಹಸಿದವರ ಹೊಟ್ಟೆ ತುಂಬಿಸಿದ ಸಿದ್ದರಾಮಯ್ಯ ಅವರು ನನ್ನ ಪಾಲಿನ ‘ಶ್ರೀರಾಮಚಂದ್ರ’ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹಾಡಿಹೊಗಳಿದ್ದಾರೆ.
ಮಂಗಳವಾರ ರಾಜ್ಯಪಾಲರ ಭಾಷ ಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾವ ಅನುಮೋದಿಸಿ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರನ್ನು ವಿಬಿಜಿ ರಾಮ್ ಜಿ ಎಂದು ಬದ ಲಿಸಿದೆ. ಅಯೋಧ್ಯೆಯಲ್ಲಿ ರಾಮಂದಿರ ಕಟ್ಟಿದರು. ಆದರೆ, ಅಯೋಧ್ಯೆಯ ಶ್ರೀರಾಮಚಂದ್ರ ಮಾತ್ರ ಚುನಾವಣೆ ಯಲ್ಲಿ ಇಂಡಿಯಾ ಕೂಟಕ್ಕೆ ಒಲಿದುಬಿಟ್ಟ. ಈಗ ಮನರೇಗಾ ಹೆಸರು ಬದಲಿಸಿ ಶ್ರೀರಾಮಚಂದ್ರನನ್ನು ಒಲಿಸಿಕೊಳ್ಳಲು ಮತ್ತೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದರು. ಜತೆಗೆ ಬಡವರ ಹಸಿವು ನೀಗಿಸುವ, ಹೊಟ್ಟೆ ತುಂಬಿಸುವ ಹಾಗೂ ಸ್ವಾಭಿಮಾನ ದಿಂದ ಬದುಕಲು ಪ್ರೇರೇಪಿಸಿದ ಸಿದ್ದರಾಮಯ್ಯ ಅವರು ನನ್ನ ಪಾಲಿನ ಶ್ರೀರಾಮಚಂದ್ರ ಎಂದರು.
