Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜಕೀಯ»ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌
ರಾಜಕೀಯ

ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 3, 2026Updated:February 3, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌

ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು ೧೨೫ ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು

ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್‌ ಅವರು ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ತಿಳಿಸಿದರು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ , ಸುನಿಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಹದಗೆಟ್ಟಿದೆ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಪರವಾಗಿ ಉತ್ತರವನ್ನು ನೀಡಿದ ಗೃಹ ಸಚಿವರು ಈ ಸಮೀಕ್ಷೆಯಲ್ಲಿ ಕರ್ನಾಟಕವು ೫೩.೮೨ ಅಂಕವನ್ನು ಪಡೆದು ಮೊದಲ ಸ್ಥಾನವನ್ನು, ಚನ್ನೈ ೪೯.೮೬ ಪಡೆದು ಎರಡನೇ ಸ್ಥಾನವನ್ನು ಪಡೆದಿವೆ ಎಂದರು.

ಇಂಡಿಯಾ ಜಸ್ಟೀಸ್ ರಿಪೋರ್ಟ್ -೨೦೨೫ ರ ಪ್ರಕಾರ ಕೂಡ ನಮ್ಮ ರಾಜ್ಯವು ಮೊದಲ ಸ್ಥಾನವನ್ನು ಪಡೆದಿರುವುದು ಕಾನೂನು ಸುವ್ಯವಸ್ಥೆಯಲ್ಲಿ ಸಮರ್ಥವಾಗಿ ಕಾರ್ಯನಿವರ್ಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು. ಈ ಎರಡೂ ಸಮೀಕ್ಷೆಗಳು ನಮ್ಮ ಕರ್ನಾಟಕ ರಾಜ್ಯವು ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಸಾಬೀತು ಪಡಿಸಿದೆ ಎಂದು ತಿಳಿಸಿದರು.

ಆರ್. ಅಶೋಕ್ ಅವರು ಗೃಹ ಸಚಿವರಾಗಿದ್ದಾಗ ೨೦೧೧-೧೩ ರಲ್ಲಿ ೪೧೨೧ ಕೊಲೆಗಳಾಗಿದ್ದರೆ, ಬೊಂಬಾಯಿ ಅವರು ಗೃಹ ಸಚಿರಾಗಿದ್ದಾಗ ೨೦೧೯-೨೧ ರವರೆಗೆ ೨೫೫೪ ಹಾಗೂ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದಾಗ ೨೪೧೭ ಕೊಲೆಗಳಾಗಿದ್ದವು. ಆದರೆ ನಮ್ಮ ಸರ್ಕಾರ ಬಂದ ಮೇಲೆ ೨೦೨೩ ರಲ್ಲಿ ೧೩೨೨ ಹಾಗೂ ೨೦೨೪ ರಲ್ಲಿ ೧೨೦೮ ಕೊಲೆ ಪ್ರಕರಣಗಳಾಗಿರುವುದಾಗಿ ಅವರು ಮಾಹಿತಿ ನೀಡುವ ಮೂಲಕ ಅವರ ಕಾಲದಲ್ಲಿಯೇ ಅತಿ ಹೆಚ್ಚು ಕೊಲೆ ಪ್ರಕರಣಗಳಾಗಿರುವುದರ ಬಗ್ಗೆ ಸದನಕ್ಕೆ ಮಾಹಿತಿ ನೀಡಿದರು.

ಇನ್ನು ಡಗ್ಸ್ ತಡೆಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ೨೦೨೩ ರಲ್ಲಿ ೧೩೩ ಕೋಟಿ ರೂ ಬೆಲೆಯ ೧೦೬೩೦ ಕೆ.ಜಿ ಗಾಂಜಾವನ್ನು, ೨೦೨೪ ರಲ್ಲಿ ೨೬೪ ಕೋಟಿ ಬೆಲೆಯ ೬೧೩೬ ಕೆ.ಜಿ ಹಾಗೂ ೨೦೨೫ ರಲ್ಲಿ ೨೦೮ ಕೋಟಿ ಬೆಲೆಯ ೬೨೭೯ ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ವರದಿಯೊಂದರಲ್ಲಿ ಗುಜರಾತ್, ಮಹಾರಾಷ್ಟ್ರ , ರಾಜಸ್ಥಾನದಲ್ಲಿ ಅತಿ ಹೆಚ್ಚು ಡ್ರಗ್ಸ್ ತಯಾರಾಗುತ್ತಿದೆ ಎಂದು ತಿಳಿದು ಬಂದಿದೆ. ನಮ್ಮ ಸರ್ಕಾರ ಡ್ರಗ್ಸ್ ಅನ್ನು ತಡೆಗಟ್ಟಲು ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಡ್ರಗ್ಸ್ ಘಟಕಗಳನ್ನು ಪತ್ತೆಹಚ್ಚುವ ಸಲುವಾಗಿ ಎಲ್ಲಾ ಎಸ್.ಪಿ ಗಳಿಗೆ ತಮ್ಮ ಏರಿಯಾದಲ್ಲಿ ಸ್ಥಾಪನೆಯಾಗುವ ಯಾವುದೇ ಕೆಮಿಕಲ್ ಘಟಕಗಳನ್ನು ಪರಿಶೀಲಿಸುವಂತೆ ಹಾಗೂ ತಮ್ಮ ಏರಿಯಾದಲ್ಲಿ ಡ್ರಗ್ಸ್ ದಂಧೆ ನಡೆಯದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಪೊಲೀಸರು ಶಾಲಾ-ಕಾಲೇಜುಗಳಿಗೆ ಹೋಗಿ ಡ್ರಗ್ಸ್ ಬಳಸುವುದರಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಕೂಡ ಮೂಡಿಸುತಿದ್ದಾರೆ ಎಂದು ತಿಳಿಸಿದರು.

ಇನ್ನು ಸೈಬರ್ ಅಪರಾಧವನ್ನು ತಡೆಗಟ್ಟಲು ಡಿ.ಜಿ ಅವರ ನೇತೃತ್ವದಲ್ಲಿ ಒಂದು ಪ್ರತ್ಯೇಕ ವಿಭಾಗವನ್ನು ರಚಿಸಲಾಗಿದೆ. ಭ್ರಷ್ಟಾಚಾರ ನಿಮ್ಮ ಸರ್ಕಾರದಲ್ಲಿ ಕೂಡ ಆಗಿದೆ. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗದಿರಬಹುದು. ಆದರೆ ನಮ್ಮ ಸರ್ಕಾರ ಭ್ರಷ್ಟಾಚಾರ ಎಸಗುವವರಿಗೆ ಎಂದಿಗೂ ರಕ್ಷಣೆ ನೀಡಿಲ್ಲ. ಇತ್ತೀಚೆಗೆ ಲಂಚ ಪಡೆಯುವಾಗ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದು ಕೇಸ್ ನಲ್ಲಿ ನಮ್ಮ ಸರ್ಕಾರ ಹಿರಿಯ ಅಧಿಕಾರಿಯೊಬ್ಬರನ್ನು ಅಮಾನತ್ತು ಕೂಡ ಮಾಡಲಾಗಿದೆ. ನಮ್ಮ ಸರ್ಕಾರ ಪೊಲೀಸ್ ಕ್ಯಾಪ್ ಅನ್ನು ಮಾತ್ರ ಬದಲಾಯಿಸಿಲ್ಲ. ಅವರ ಮಾನಸಿಕ ಸ್ಥೈರ್ಯ ವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಅವರು, ಗೃಹ ಇಲಾಖೆಯು ನಮ್ಮ ರಾಜ್ಯದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲು ಬಯಸುತ್ತೇನೆ ಎಂದು ಸದನಕ್ಕೆ ತಿಳಿಸಿದರು.

Bangalore chitradurga goverment karanataka ಚಿತ್ರದುರ್ಗ ಡಾ.ಪರಮೇಶ್ವರ್
Follow on Facebook Follow on Instagram
Share. Facebook Twitter WhatsApp Telegram
Previous Articleಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ
Next Article ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.