ಬೆಂಗಳೂರು: ಕರ್ನಾಟಕದ ಸೂಪರ್‌ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವರಣದೀಪ್ ಸುರ್ಜೇವಾಲಾ ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಖಾರವಾಗಿ ಪೋಸ್ಟ್ ಮಾಡಿ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ನಮ್ಮ ಚುನಾಯಿತ ಸಿಎಂ ಸರ್ಕಾರ ನಡೆಸಲು ಸುರ್ಜೇವಾಲಾ ಅವರಿಗೆ ಜಿಪಿಎ ನೀಡಿದ್ದಾರೆ ಎಂದು ಟೀಕಿಸಿದ್ದಾರೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಈಗ ಕ್ಷೇತ್ರದ ಅಭಿವೃದ್ಧಿಗೆ ಸುರ್ಜೇವಾಲಾರನ್ನು ಸುತ್ತುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೊರ ಹೋಗುತ್ತಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್ ಅವರು ಕುರ್ಚಿಗಾಗಿ ಕಾಯುತ್ತಿದ್ದಾರೆ. ಆದರೆ ಸುರ್ಜೇವಾಲಾ ಅವರು ರಾಜ್ಯದಲ್ಲಿ ಆಡಳಿತನಡೆಸುತ್ತಿದ್ದಾರೆ ಎಂದು ಕುಹಕವಾಡಿದ್ದಾರೆ. ಕಾಂಗ್ರೆಸ್ ಪಕ್ಷಕರ್ನಾಟಕವನ್ನು ಕೈಗೊಂಬೆ ರಾಜ್ಯವನ್ನಾಗಿ ಮಾಡಿಕೊಂಡು ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವವನ್ನು ಅಣಕ ಮಾಡುತ್ತಿದೆ ಎಂದು ನಿಖಿಲ್ ವ್ಯಂಗ್ಯವಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



