ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದು ಅವರ ಅಭಿಮಾನಿಗಳಿಗೆ ಅಪಾರ ಸಂತಸ ಉಂಟುಮಾಡಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು.ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.1972ರಲ್ಲಿ ವಿಷ್ಣುವರ್ಧನ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ವರ್ಷ ಅವರು ನಟಿಸಿದ ‘ವಂಶವೃಕ್ಷ’, ‘ನಾಗರಹಾವು’ ಸಿನಿಮಾಗಳು ಬಿಡುಗಡೆ ಆದವು. ಬಳಿಕ ಕನ್ನಡ ಚಿತ್ರರಂಗದಲ್ಲಿ ಅವರು ಭರವಸೆಯ ನಟನಾಗಿ ಬೆಳೆದರು. ಹಲವು ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡರು. ಅಭಿಮಾನಿಗಳ ಪಾಲಿಗೆ ‘ಸಾಹಸ ಸಿಂಹ’ ಎನಿಸಿಕೊಂಡರು. ಚಿತ್ರರಂಗದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







