ಚಿತ್ರದುರ್ಗ: ವರ್ಷಿತಾಳನ್ನು ಬರ್ಬರವಾಗಿ ಹತ್ಯೆಗೈದಿರುವವರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಯುವ ಕರ್ನಾಟಕ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟುಹಾಕಿರುವುದು ಇಡಿ ನಾಗರೀಕ ಸಮಾಜ ತಲೆತಗ್ಗಿಸುವಂತದ್ದು, ಈ ಕೃತ್ಯದ ಹಿಂದೆಯಾರ್ಯಾರ ಕೈವಾಡವಿದೆ ಎನ್ನುವುದನ್ನು ಸಮಗ್ರ ತನಿಖೆ ಮೂಲಕ ಬಯಲಿಗೆಳೆಯುವ ಕೆಲಸವನ್ನು ಪೊಲೀಸರು ಮಾಡಬೇಕಿದೆ.ಹತ್ಯೆಗೀಡಾಗಿರುವ ವರ್ಷಿತಾಳ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವ ಹೊಣೆಗಾರಿಕೆ ಸರ್ಕಾರದ ಮೇಲಿದೆ. ನಿರ್ಲಕ್ಷೆಮಾಡಬಾರದು. ಚಿತ್ರದುರ್ಗದಲ್ಲಿ ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದೆಂದರೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು
ಪ್ರತಿಭಟನಾನಿರತರು ಆಗ್ರಹಿಸಿದರು.
ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ನಾಯ್ಕ, ಉಪಾಧ್ಯಕ್ಷ ಮಂಜಣ್ಣ, ರೈತ ಸಂಘದ ಅಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿಓಬಣ್ಣ, ತಾಲ್ಲೂಕು ಅಧ್ಯಕ್ಷ ಸಚಿನ್, ಯಶವಂತ್, ನಾಗರಾಜ್, ರಘುನಾಯ್ಕ, ಸತೀಶ್, ಗಿರೀಶ್, ಎಸ್.ನಾಗರಾಜ, ರವಿಶಂಕರ್,ಶಿವಶಂಕರ್, ಪ್ರಕಾಶ್, ನಿಂಗಪ್ಪ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







