ಚಿತ್ರದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೆಪ್ಟಂಬರ್ 03ರಂದು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನುಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಿ ಹಾಗೂ ಶಿಕ್ಷಕರು ಮುಷ್ಕರಕ್ಕೆಹೋಗದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ತಿಳಿಸುತ್ತಾ, ಸಕರಾತ್ಮಕ ನಿರ್ಧಾರದನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದರಿಂದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದಿರುವುದಾಗಿ ಕರ್ನಾಟಕ ರಾಜ್ಯಪ್ರಾಥಮಿಕ ಶಿಕ್ಷಕರ ಸಂಘದ ಚಿತ್ರದುರ್ಗ ತಾಲ್ಲೂಕು ಘಟಕದ ತಾಲ್ಲೂಕು ಅಧ್ಯಕ್ಷರಾದ ಕೆಂಚಪ್ಪ.ಎಸ್ ತಿಳಿಸಿದ್ದಾರೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧುಬಂಗಾರಪ್ಪನವರ ನೇತೃತ್ವದಲ್ಲಿ ಆ. 29 ರಂದು ನಡೆದ ಸಭೆಯಲ್ಲಿಶಿಕ್ಷಕರ ವಿವಿಧ ಬೇಡಿಕೆಗಳಾದ 2016ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಪದವೀಧರ ಶಿಕ್ಷಕರೆಂದು ಸೇವಾ ಜೇಷ್ಠತೆನೀಡಬೇಕು.ಪ್ರಾ.ಶಾ.ಶಿಕ್ಷಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಸಿ ಅಂಡ್ ಆರ್4 ತಿದ್ದುಪಡಿಯಾಗಬೇಕು.ಹಾಗೂ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದು. ಈ ಬೇಡಿಕೆಗಳ ಬಗ್ಗೆ ರಾಜ್ಯದ ಎಲ್ಲಾಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರೊಂದಿಗೆ ನಿಲ್ಲುತ್ತದೆ. ಈ ಎಲ್ಲಾ ಬೇಡಿಕೆಗಳನ್ನುಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಗೆ ತರುವ ಭರವಸೆ ನೀಡಲಾಯಿತುಹಾಗೂ ಶಿಕ್ಷಕರು ಮುಷ್ಕರಕ್ಕೆ ಹೋಗದಂತೆ ತಿಳಿಸುತ್ತಾ, ಸಕರಾತ್ಮಕ ನಿರ್ಧಾರದ ನಿರೀಕ್ಷೆಯ ಬಗ್ಗೆ ಭರವಸೆ ವ್ಯಕ್ತಪಡಿಸಿದರು.
ಆದ್ದರಿಂದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಾತ್ಕಾಲಿಕವಾಗಿ ಸೆ. 03 ರಂದು ನಡೆಸಲು ತೀರ್ಮಾನಿಸಿದ್ದ
ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.ಈ ಸಭೆಯಲ್ಲಿ ಇಲಾಖಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ.ಕೆ.ವಿ, ಪ್ರಾಥಮಿಕಶಾಲಾ ನಿರ್ದೇಶಕರಾದ ಅನಿತ ನಜಾರೀಯ ಹಾಗೂ ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರು ಚಂದ್ರಶೇಖರ್ಮೂಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಚೇತನ್, ರಾಜ್ಯ ಸಂಘದ ಗೌರವಾಧ್ಯಕ್ಷರಾದ ನಾಗೇಶ್ ರಾಜ್ಯಉಪಾಧ್ಯಕ್ಷರಾದ ಮಾರುತೇಶ್ ಚಿತ್ರದುರ್ಗ ಜಿಲ್ಲಾ ಘಟಕ ಅಧ್ಯಕ್ಷರಾದ ಜಿ.ವಿ.ಮಹಂತೇಶ್ ಪ್ರಧಾನ ಕಾರ್ಯದರ್ಶಿಜಿ.ಟಿ.ಹನುಮಂತಪ್ಪ ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







