Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ
ರಾಜ್ಯ

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 29, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

ನವದೆಹಲಿ: ರಾಜಸ್ಥಾನದ ಪ್ರಸಿದ್ಧ ಜಲತಜ್ಞ ಹಾಗೂ ಮ್ಯಾಗ್ಸೆಸೆ ಪುರಸ್ಕೃತ ಡಾ. ರಾಜೇಂದ್ರ ಸಿಂಗ್ ಅವರು ಕರ್ನಾಟಕದ ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ದೆಹಲಿಯಲ್ಲಿ ಭೇಟಿಯಾಗಿ ಜಲ ಸಂರಕ್ಷಣೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮಹತ್ವದ ಚರ್ಚೆ ನಡೆಸಿದರು.

ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ₹21 ಸಾವಿರ ಕೋಟಿ ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆ ಅನುದಾನದ ಕೊರತೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆ, ಯೋಜನೆ ಪೂರ್ಣಗೊಳಿಸಲು ಸಂಕಲ್ಪಗೊಂಡು ಜಗದ್ಗುರುಗಳು ದೆಹಲಿಯಲ್ಲಿ ಪ್ರಮುಖ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿರುವ ವೇಳೆ ಈ ಭೇಟಿ ನಡೆದಿದೆ.

ಈ ವೇಳೆ ಮಾತನಾಡಿದ ಡಾ. ರಾಜೇಂದ್ರ ಸಿಂಗ್, ಜಲ ಸಮಸ್ಯೆ ಜಾಗತಿಕ ಮಟ್ಟದಲ್ಲಿ ಗಂಭೀರವಾಗುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಜಲ ಸಾಕ್ಷರತೆ ಹಾಗೂ ನೀರಿನ ಸಂಗ್ರಹಣೆಯ ಕ್ರಮಗಳು ಅವಶ್ಯಕ ಎಂದು ತಿಳಿಸಿದರು.

ಮಳೆನೀರು ಸಂಗ್ರಹ, ಚೆಕ್‌ಡ್ಯಾಂ ನಿರ್ಮಾಣ ಹಾಗೂ ಅಂತರ್ಜಲ ಹೆಚ್ಚಿಸುವ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಜಗದ್ಗುರುಗಳು ಮಾತನಾಡಿ, ಪ್ರಕೃತಿಯ ಪಂಚಭೂತಗಳೊಂದಿಗೆ ಮಾನವ ಸಂಬಂಧ ಕಡಿಮೆಯಾಗುತ್ತಿರುವುದು ಜಲ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ರೈತರು ಮಳೆಗೆ ಅನುಗುಣವಾಗಿ ಬೆಳೆ ಪದ್ಧತಿಯನ್ನು ರೂಪಿಸಬೇಕು ಹಾಗೂ ಕಡಿಮೆ ನೀರಿನಲ್ಲಿ ಹೆಚ್ಚು ಉತ್ಪಾದನೆ ನೀಡುವ ಬೆಳೆಗಳನ್ನು ಬೆಳೆಯಬೇಕು ಎಂದು ಸಲಹೆ ನೀಡಿದರು.

ರಾಜಸ್ಥಾನಕ್ಕಿಂತ ಹೆಚ್ಚು ಮಳೆಯಾಗುವ ಕರ್ನಾಟಕದಲ್ಲೇ ನೀರಿನ ಸಮಸ್ಯೆ ಉಂಟಾಗುತ್ತಿರುವುದು ಜಲ ನಿರ್ವಹಣೆಯ ಕೊರತೆಯ ಸೂಚಕ ಎಂದು ಅಭಿಪ್ರಾಯಪಟ್ಟ ಡಾ. ಸಿಂಗ್, ಮಳೆಗಾಲದ ಮುನ್ನವೇ ನೀರು ಸಂಗ್ರಹಿಸುವ ಅಭಿಯಾನ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ತಾಂತ್ರಿಕ ಸಲಹಾ ಸಮಿತಿ (TAC) ಅನುಮೋದನೆ ದೊರೆತಿದ್ದು, ಮುಂದಿನ ಹಂತಗಳಲ್ಲಿ ಕೇಂದ್ರ ಸರ್ಕಾರದ ಅನುಮತಿ ಸಿಕ್ಕಲ್ಲಿ ಯೋಜನೆಗೆ ಹೆಚ್ಚಿನ ಅನುದಾನ ಲಭ್ಯವಾಗುವ ನಿರೀಕ್ಷೆಯಿದೆ. ಯೋಜನೆ ಪೂರ್ಣಗೊಂಡರೆ ಸುಮಾರು 2.25 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಲಕ್ಷಾಂತರ ರೈತರಿಗೆ ಪ್ರಯೋಜನವಾಗಲಿದೆ ಎಂದು ಜಗದ್ಗುರುಗಳು ತಿಳಿಸಿದರು.

Bangalore chitradurga karanataka ಕರ್ನಾಟಕ ಚಿತ್ರದುರ್ಗ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ
Next Article ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

March 29, 2026

ನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

March 29, 2026

ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ

March 29, 2026
Add A Comment
Leave A Reply Cancel Reply

Advertisement
Latest Posts

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.