ಕರೂರು: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಮೂವತ್ತಾರು ಜನರು ಸಾವನ್ನಪ್ಪಿದ್ದಾರೆ.40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತ ಕುರಿತು ಕೇಂದ್ರ ಸರ್ಕಾರ ತಮಿಳುನಾಡಿನಿಂದ ವರದಿ ಕೇಳಿದೆ.ಈ ಮಧ್ಯೆ ದುರಂತ ಕುರಿತು ಟಿವಿಕೆ ಮುಖ್ಯಸ್ಥ ವಿಜಯ್ ಮೌನ ಮುರಿದಿದ್ದಾರೆ. ಈ ದುರಂತದಿಂದ ಹೃದಯ ಚೂರಾಗಿದೆ. “ಅಸಹನೀಯ, ವಿವರಿಸಲಾಗದ ನೋವು ಮತ್ತು ದುಃಖದಲ್ಲಿರುವುದಾಗಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ವಿಜಯ್, ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ವರದಿ ಕೇಳಿದ ಕೇಂದ್ರ
ಕರೂರಿನಲ್ಲಿ ಕಾಲ್ತುಳಿತದ ನಂತರ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕೇಂದ್ರ ಗೃಹ ಸಚಿವಾಲಯವು ಘಟನೆಯ ಬಗ್ಗೆ ತಮಿಳುನಾಡು ಸರ್ಕಾರದಿಂದ ವರದಿಯನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ.ತಮಿಳುನಾಡು ಸರ್ಕಾರಕ್ಕೆ ಕಳುಹಿಸಿರುವ ಪತ್ರದಲ್ಲಿ, ಕಾಲ್ತುಳಿತಕ್ಕೆ ಕಾರಣವಾದ ಪರಿಸ್ಥಿತಿ ಮತ್ತು ಬಲಿಪಶುಗಳ ರಕ್ಷಣೆ ಮತ್ತು ಚಿಕಿತ್ಸೆಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ವಿವರಗಳನ್ನು ನೀಡುವಂತೆ ಗೃಹ ಸಚಿವಾಲಯ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







