ನವದೆಹಲಿ: ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥ ದ್ದೊಂದು ವದಂತಿ ದೆಹಲಿ ಮತ್ತು ಕಾಶ್ಮೀರದಲ್ಲಿ ಬಹು ದೊಡ್ಡದಾಗಿ ಕೇಳಿಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಬಳಿಕ ಏನೋ ದೊಡ್ಡ ಬೆಳವಣಿಗೆಯ ಸಾಧ್ಯತೆ ಇದೆ ಎನ್ನಲಾಗಿತ್ತು.ಅದರ ಬೆನ್ನಲ್ಲೇ ಸೋಮವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಗುಪ್ತಚರ ಇಲಾಖೆ ಮುಖ್ಯಸ್ಥರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿದೇಶಾಂಗ ಅಲ್ಲದೆ ಸಚಿವ ಜೈಶಂಕರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ಕಾಶ್ಮೀರದ ಕುರಿತಾಗಿದ್ದು ಎಂಬ ವದಂತಿ ಹಬ್ಬಿದೆ.2019ರ ಆ.5ರಂದು ಕೇಂದ್ರ ಸರ್ಕಾರವು ಲಡಾಖ್ ಮತ್ತು ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು.ಹೀಗಾಗಿ ಆ.6ರಂದೇ ಕೇಂದ್ರ ಸರ್ಕಾರ ಈ ಕುರಿತು ಘೋಷಣೆ ಮಾಡಬಹುದು ಎನ್ನಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



