Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
ರಾಜ್ಯ

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

Times Of Bayaluseeme StaffBy Times Of Bayaluseeme StaffJune 16, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
cm-dk-shivakumar
Share
WhatsApp Twitter Facebook Telegram

ಬೆಂಗಳೂರು: ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಪ್ರತಿ ವರ್ಷದಂತೆ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಎಲ್ಲಾ ಸಂಘಟನೆಗಳ ಜತೆ ಚರ್ಚೆ ಮಾಡಲಾಗಿದೆ. ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ. ಇನ್ನು ಮಾಗಡಿ ತಂಡವನ್ನು ಸ್ಥಳೀಯ ಶಾಸಕರಾದ ಬಾಲಕೃಷ್ಣ, ಹುಲಿಯೂರು ದುರ್ಗ ಕಡೆಯಿಂದ ರಂಗನಾಥ್ ಅವರು ಮುನ್ನಡೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಾರ್ಯಕ್ರಮವನ್ನು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರಿಂದ ನಡೆಸಲಾಗುವುದು. ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ತಯಾರಿ ಮಾಡಲಾಗುವುದು” ಎಂದು ತಿಳಿಸಿದರು.

“ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ನಿರ್ಮಿಸಲು ತೀರ್ಮಾನಿಸಲಾಗಿತ್ತು. ಅದರ ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಜಯಂತಿ ಆಚರಿಸಲಾಗುವುದು. ಇದಕ್ಕಾಗಿ 1 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೊಂದು ದಿನ ಬೆಂಗಳೂರಿನ 369 ವಾರ್ಡ್ ಗಳಲ್ಲಿ ಈ ಕಾರ್ಯಕ್ರಮ ನಡೆಸಲು ಜಿಬಿಎ ವತಿಯಿಂದ ತಲಾ 1 ಲಕ್ಷ ಅನುದಾನ ನೀಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಬೆಂಗಳೂರು ನಗರದ ಸಚಿವರು ತೀರ್ಮಾನ ಮಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ” ಎಂದರು.

“ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಥೀಮ್ ಪಾರ್ಕ್ ಪೂರ್ಣಗೊಂಡಿದ್ದು, ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲು ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ತಯಾರಿ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಗಣ್ಯರು, ಸ್ವಾಮೀಜಿಗಳು ಹಾಗೂ ನಾಯಕರ ಆಹ್ವಾನದ ಜವಾಬ್ದಾರಿಯನ್ನು ಕೃಷ್ಣ ಬೈರೇಗೌಡರು ವಹಿಸಿಕೊಂಡಿದ್ದಾರೆ. ಸಂಘಟನೆಗಳು ಹಾಗೂ ಒಕ್ಕಲಿಗರ ಸಂಘ ತಮ್ಮದೇ ಆದ ಜವಾಬ್ದಾರಿ ಹೊತ್ತುಕೊಂಡಿವೆ. ಈ ಕಾರ್ಯಕ್ರಮ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಲ್ಲ. ಕೆಂಪೇಗೌಡರು ಬೆಂಗಳೂರು ನಗರ ಹಾಗೂ ರಾಜ್ಯದ ಆಸ್ತಿ. ಎಲ್ಲಾ ಧರ್ಮ, ಜಾತಿ, ಸಂಘಟನೆಯವರು ಸೇರಿ ಜಯಂತಿ ಆಚರಿಸಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ವ್ಯಕ್ತವಾದ ಸಲಹೆಗಳು:

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅನೇಕ ಸಲಹೆಗಳು ವ್ಯಕ್ತವಾಗಿದ್ದು, ಕೆಂಪೇಗೌಡ ಸಮಾಧಿ ಸ್ಥಳವನ್ನು 10 ಎಕರೆ ಜಾಗದಲ್ಲಿ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಕೆಂಪೇಗೌಡರ ಕೋಟೆ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದ ಟೆಂಡರ್ ಆಗಿದ್ದು, ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು. ಜಿಬಿಎ ವ್ಯಾಪ್ತಿಯಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಬೇಕು ಎಂಬ ವಿಚಾರಗಳು ಚರ್ಚೆಯಾದವು. ಉಳಿದಂತೆ ಬಂದ ಸಲಹೆಗಳು ಹೀಗಿವೆ..

• ನಾಡಪ್ರಭು ಕೆಂಪೇಗೌಡ ಅವರನ್ನು ಬೆಂಗಳೂರಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ
• ಎಲ್ಲಾ ಜಿಲ್ಲೆಗಳಲ್ಲಿ ಕೆಂಪೇಗೌಡ ಜಿಲ್ಲಾ ಭವನ ನಿರ್ಮಾಣ
• ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಉದ್ಯಾನವನ ಹಾಗೂ ಅಂತಾರಾಷ್ಟ್ರೀಯ ಸಮುದಾಯ ಭವನ ನಿರ್ಮಾಣ
• ಕೆಂಪೇಗೌಡರ ವಸ್ತುಸಂಗ್ರಹಾಲಯ
• ಕೆಂಪೇಗೌಡರ ಸ್ಮರಣೆಯಲ್ಲಿ ಬೆಂಗಳೂರಿನ ಕೆರೆಗಳ ಶುದ್ಧೀಕರಣ, ಪುನಶ್ಚೇತನ
• ಸ್ವಾಮಿನಾಥನ್ ವರದಿ ಆಧರಿಸಿ ಜಲ ನಿರ್ವಹಣೆ ಬಗ್ಗೆ ಬೆಂಗಳೂರಿಗರಿಗೆ ಜಾಗೃತಿ ಮೂಡಿಸಲು ಕಾರ್ಯಾಗಾರ
• ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಜೀವನ ಚರಿತ್ರೆ
• ಕೆಂಪೇಗೌಡ ಜಯಂತಿಯಂದು ಸರ್ಕಾರಿ ರಜೆ ಘೋಷಣೆ
• ನಗರದ ನಾಲ್ಕು ದಿಕ್ಕಿನಲ್ಲಿ 50-60 ಅಡಿ ಎತ್ತರದ ಕೆಂಪೇಗೌಡರ ಕಲ್ಲಿನ ಪ್ರತಿಮೆ ನಿರ್ಮಾಣ
• ಬೆಂಗಳೂರು ಗ್ರಾಮಾಂತರ ಜಿಲ್ಲೆ ಆವತಿ ಗ್ರಾಮ ಅಭಿವೃದ್ಧಿ

BDA saplings DK Shivakumar Kempegowda Jayanti Kempegowda theme park. ಕೆಂಪೇಗೌಡ ಬಡಾವಣೆ ಡಿ.ಕೆ. ಶಿವಕುಮಾರ್ ನಾಡಪ್ರಭು ಕೆಂಪೇಗೌಡ ಜಯಂತಿ 2026 ಬಿಡಿಎ 15 ಲಕ್ಷ ಗಿಡಗಳು ಬೆಂಗಳೂರು ವಾರ್ಡ್ ಅನುದಾನ
Follow on Facebook Follow on Instagram
Share. Facebook Twitter WhatsApp Telegram
Previous Article16/06/2026 ರ ನಿತ್ಯ ಭವಿಷ್ಯ
Times Of Bayaluseeme Staff
  • Website

Related Posts

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

June 15, 2026

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

June 14, 2026

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

June 14, 2026
Add A Comment
Leave A Reply Cancel Reply

Advertisement
Latest Posts

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.