ತಿರುವನಂತಪುರ: ಮುಸ್ಲಿಂ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರವಾಯೂರು ಶ್ರೀ ಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ದೀಕರಣ’ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ.ಇದೇ ಕಾರಣ: ಸಾಮಾಜಿಕ ಮಾಧ್ಯಮ ಇನ್ ಫ್ಲುಯೆನ್ಸರ್ ಜಾಸ್ಮಿನ್ ಜಾಫರ್ ದೇವಸ್ಥಾನದ ಕೊಳದಲ್ಲಿ ತಮ್ಮ ಪಾದಗಳನ್ನು ತೊಳೆಯುತ್ತಿರುವ ದೃಶ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅವರು ಪೋಸ್ಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದರು.ಈ ಬೆಳವಣಿಗೆ ಬೆನ್ನಲ್ಲೇ ಶುದ್ದೀಕರಣ ಕಾರ್ಯದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಸಂಬಂಧ ಪ್ರಕಟಣೆ ಹೊರಡಿಸಿದ್ದು, ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು. ಅಂದು ಬೆಳಿಗ್ಗೆ 5 ರಿಂದ ಮಧ್ಯಾಹ್ನದವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.ದೇವಾಲಯದ ಆವರಣದಲ್ಲಿ ರೀಲ್ಸ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನ್ಯಾಯಾಲಯ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







