ಕೆರೆ ಒತ್ತುವರಿ ತೆರವು ಕಾರ್ಯಾಚರಣೆ; ನಿಗಧಿಯಾಯ್ತು ದಿನ
ಚಿತ್ರದುರ್ಗ: ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014ರ ಕಾಯ್ದೆ ಅನುಸಾರ ಏಪ್ರಿಲ್ 8ರಂದು ಚಳ್ಳಕೆರೆ ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತಿದೆ.
ಕಂದಾಯ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
