ನವದೆಹಲಿ: ದರ್ಶನ್‌ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣ ನೀಡಿ, ಜಾಮೀನು ಪಡೆದಿರುವ ದರ್ಶನ್, ಬಳಿಕ, ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ವಾದದಲ್ಲಿ ತಿಳಿಸಿದ್ದಾರೆ.ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಮತ್ತು ಅವರ ಅವರ ಸಹಚರರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ಗೆ ಬುಧವಾರ ಹೆಚ್ಚುವರಿ ಅಫಿಡವಿಟ್ ‘ಸಲ್ಲಿಸಿದ್ದು, ಅದರಲ್ಲಿ ಆರೋಪಿಗಳ ವಿರುದ್ದ ಪ್ರಬಲ ಸಾಕ್ಷ್ಯಾಧಾರಗಳ ಸರಮಾಲೆಯನ್ನೇ ಮುಂದಿಟ್ಟಿದ್ದಾರೆ. ಇದೇ ವೇಳೆ, ದರ್ಶನ್ ಪರ ವಕೀಲರಿಂದಲೂ ಅಫಿಡವಿಟ್ ಸಲ್ಲಿಕೆಯಾಗಿದೆ.ರೇಣುಕಾಸ್ವಾಮಿಯನ್ನು ಅಪಹರಿಸಿ, ಶೆಡ್‌ನಲ್ಲಿ ಕೊಲೆ ಮಾಡಲಾಗಿದೆ. ಆರೋಪಿಗಳು ಕೊಲೆ ನಡೆದ ಸ್ಥಳದಲ್ಲಿ ಇದ್ದರು ಎಂದು ತಿಳಿಸಿದ್ದಾರೆ.
ಸರ್ಕಾರದ ವಾದವೇನು..?
ತಾವು ಸಲ್ಲಿಸಿದ ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ಮೈಮೇಲೆ ಗಂಭೀರ ಗಾಯಗಳಾಗಿವೆ. ಇನ್ನು, ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ. ವಿಳಂಬಕ್ಕೆ ಸೂಕ್ತ ಕಾರಣ ನೀಡಲಾಗಿದೆ.
ದರ್ಶನ್ ಪರ ವಾದ:
ಇದೇ ವೇಳೆ, ದರ್ಶನ್ ಪರ ವಕೀಲರು ಸಲ್ಲಿಸಿದ ಲಿಖಿತ ವಾದದಲ್ಲಿ, ದರ್ಶನ್ ಬಂಧನದ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. ಅವರನ್ನು ಮೈಸೂರಿನಲ್ಲಿ ಬಂಧಿಸಿದ್ದು, ಬೆಂಗಳೂರಿನಲ್ಲಿ FIR ದಾಖಲಿಸಲಾಗಿದೆ. ಬಂಧನಕ್ಕೆ ಕಾರಣಗಳನ್ನು ನೀಡದಿರುವುದು ಕಾನೂನು ಉಲ್ಲಂಘನೆ. ಘಟನೆ ನಡೆದ 7 ದಿನಗಳ ನಂತರ ಸಾಕ್ಷಿ ಹೇಳಿಕೆ ದಾಖಲಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ವಾದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



