ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.ಎನ್ಎಚ್ಎಐ ವಿಭಾಗ ಹಾಸನದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಆರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕಬಳಾಪುರದ ಜೂನಿಯರ್ ಇಂಜಿನಿಯರ್ ಆಂಜನೇಯ ಮೂರ್ತಿ ಎಂ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಬಿಬಿಎಂಪಿ ದಾಸರಹಳ್ಳಿ ಉಪವಿಭಾಗದ ಕಂದಾಯ ಅಧಿಕಾರಿ ಎನ್ ವೆಂಕಟೇಶ್ ಮತ್ತು ಬೆಂಗಳೂರಿನ ಬಿಡಿಎ ಕೇಂದ್ರ ಕಚೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಕೆ ಓಂ ಪ್ರಕಾಶ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ವೆಂಕಟೇಶ್ ಅವರಿಗೆ ಸೇರಿದ ಐಷಾರಾಮಿ ಬಂಗಲೆ ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಗಮನಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



