ಹಡಗಲಿ : ಪ್ರಿಯಕರನ ಮೋಸಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದೇನೆಂದು ಡೆತ್ ನೋಟ್ ಬರೆದಿಟ್ಟು ವಿವಾಹಿತೆ ಮಹಿಳೆವೊಬ್ಬರು ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ಸೇತುವೆ ಬಳಿ ನಡೆದಿದೆ. ಸೇತುವೆ ಮೇಲಿಂದ ನದಿಗೆ ಜಿಗಿಯುತ್ತಿರುವುದನ್ನ ಬೈಕ್ ಸವಾರರು ನೋಡಿ ಮದಲಗಟ್ಟಿ ಗ್ರಾಮಸ್ಥರಿಗೆ ತಿಳಿಸಿದ್ದಾನೆ. ನದಿಯ ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಿಲು ಯತ್ನಿಸಿದ್ದಾರೆ. ಆದ್ರೆ ನೀರಿನ ರಬಸಕ್ಕೆ ಮಹಿಳೆ ಕೊಚ್ಚಿ ಹೋಗಿದ್ದಾಳೆ ಎನ್ನಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮಹಿಳೆಯ ಶೋಧಕಾರ್ಯಕ್ಕೆ ನಡೆಸಿದ್ದಾರೆ. ನದಿಯಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿರೋ ಮಹಿಳೆಯ ಕೆ.ಅಯ್ಯನಹಳ್ಳಿ ಗ್ರಾಮದವರು ಅಂತೇಳಲಾಗ್ತಿದ್ದು, ಗುರುತು ಪತ್ತೆಯಾಗಿಲ್ಲ. ಈ ಸಂಬಂಧ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



