ಹೊಳಲ್ಕೆರೆ : ಇನ್ನು ಮೂರು ವರ್ಷಗಳ ಕಾಲ ಅಧಿಕಾರದಲ್ಲಿರುತ್ತೇನೆ. ಸಾಕಷ್ಟು ಕೆಲಸ ಮಾಡುವುದಿದೆ. ಕರ್ನಾಟಕ ಪಬ್ಲಿಕ್ ಶಾಲೆಮಂಜೂರು ಮಾಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತವಾಗಿ ಬಸ್ಗಳನ್ನು ಬಿಡುತ್ತೇನೆಂದು ಶಾಸಕ
ಡಾ.ಎಂ.ಚಂದ್ರಪ್ಪ ಹೇಳಿದರು.ಉಪ್ಪರಿಗೇನಹಳ್ಳಿ ಗ್ರಾಮದ ಹತ್ತಿರ ಐದು ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್ಡ್ಯಾಂಗೆ ಬಾಗಿನ ಸಲ್ಲಿಸಿಮಾತನಾಡಿದರು.ಈ ಭಾಗದಲ್ಲಿ ಎಲ್ಲಾ ಕಡೆ ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ವಿದ್ಯುತ್ ಪವರ್ ಸ್ಟೇಷನ್ನಿರ್ಮಾಣವಾಗಿದೆ. ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನವಾಣಿವಿಲಾಸಸಾಗರದಿಂದ ನೀರು ತರಲು 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಎಲ್ಲಾ ಕಡೆ ಸಿ.ಸಿ.ರಸ್ತೆ, ಕೆರೆಗಳಅಭಿವೃದ್ದಿ, ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ. ಕೆರೆಗಳಿಗೆ ನೀರು ತುಂಬಿಸಲು ಇನ್ನೂರು ಕೋಟಿ ರೂ. ಮುನ್ನೂರರಿಂದನಾಲ್ಕು ನೂರು ರೂ.ಗಳನ್ನು ಚೆಕ್ಡ್ಯಾಂ ಕಟ್ಟಲು ಖರ್ಚು ಮಾಡಲಾಗಿದೆ. ಚುನಾವಣೆಯಲ್ಲಿ ಮತ ನೀಡುವುದು ಒಂದು ನಿಮಿಷದಕೆಲಸ. ಯಾರು ನಿಮ್ಮ ಕಷ್ಠ-ಸುಖಗಳನ್ನು ಕೇಳುತ್ತಾರೋ ಅಂತಹವರಿಗೆ ಓಟ್ ಹಾಕಿ ಗೆಲ್ಲಿಸಿ ಎಂದು ಶಾಸಕ ಡಾ.ಎಂ.ಚಂದ್ರಪ್ಪಮನವಿ ಮಾಡಿದರು.
ಅಧಿಕಾರ ಮುಖ್ಯವಲ್ಲ. ಇರುವಷ್ಟು ದಿನ ಹತ್ತಾರು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಬೇಕೆಂದುಕೊಂಡಿರುವ ರಾಜಕಾರಣಿನಾನು. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಎಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡರೆ ಜನರಿಗೆ ಒಳ್ಳೆಯದಾಗುತ್ತದೆಂದುಚಿಂತಿಸಿ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆಂದರು.ಗ್ರಾಮಸ್ಥ ಚಂದ್ರಣ್ಣ ಮಾತನಾಡಿ ಯಾವುದೇ ಜಾತಿ ತಾರತಮ್ಯವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಇಂತಹ ಶಾಸಕರನ್ನುನಾನು ಇದುವರೆವಿಗೂ ಕಂಡಿಲ್ಲ. ಪ್ರತಿನಿತ್ಯವೂ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳು ಕ್ಷೇತ್ರದಲ್ಲಿ ನಡೆಯುತ್ತಿರುತ್ತವೆ. ರೈತರಿಗೆತೊಂದರೆಯಾಗಬಾರದೆಂದು ವಿದ್ಯುತ್ ಪವರ್ ಸ್ಟೇಷನ್ಗಳನ್ನು ಕಟ್ಟಿಸಿದ್ದಾರೆ. ಗುಣ ಮಟ್ಟದ ರಸ್ತೆ, ಚೆಕ್ಡ್ಯಾಂಗಳ ನಿರ್ಮಾಣ,ಶಾಲಾ-ಕಾಲೇಜು, ಆಸ್ಪತ್ರೆಗಳನ್ನು ಕಟ್ಟಿಸಿ ಜನರಿಗೆ ಅನುಕೂಲ ಮಾಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ, ಸದಸ್ಯರುಗಳಾದ ಸುರೇಶ್, ಪ್ರವೀಣ್, ಚಂದ್ರಣ್ಣ, ಹನುಮಂತರಾಜು, ನಟರಾಜ್,ಬೋರಣ್ಣ, ಗಿರೀಶ್, ಮನು, ಗುತ್ತಿಗೆದಾರ ಹೆಚ್.ಜಗದೀಶ್ ಹಾಗೂ ರೈತರು, ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



