ಬೆಂಗಳೂರು: ಬೇರೆ ಜಿಲ್ಲೆಗೆ ನೀರು ಕೊಡುವ ಉದ್ದೇಶದಿಂದ ಭದ್ರಾ ಜಲಾಶಯದಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿ ಕೈಬಿಟ್ಟು ತಡೆ ಗೋಡೆ ನಿರ್ಮಿಸುವಂತೆ ಆಗ್ರಹಿಸಿ ಜು.14ರಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ನಿವಾಸಕ್ಕೆ ಸಾವಿರಾರು ರೈತರೊಂದಿಗಿ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಈಗಾಗರ್ಲೆ ಕಾಮಗಾರಿ ನಿಲ್ಲಿಸಿ ತಡೆಗೋಡೆ ನಿರ್ಮಿಸುವಂತೆ ಆಗ್ಲ ಹಿಸಿ ದಾವಣಗೆರೆ ಬಂದ್, ರಾಷ್ಟ್ರೀಯ ಹೆದ್ದಾರಿ ತಡೆ, ಬೈಕ್ ರ್ಯಾಲಿ ನಡೆಸಲಾಗಿದೆ. ಸಾವಿರಾರು ರೈತರು ಪಾಲ್ಗೊಂಡಿದ್ದರು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ.14ರಂದು ರೈತರು ಬೆಂಗಳೂರಿಗೆ ಬರುತ್ತಿದ್ದು, ಸಿಎಂ, ಡಿಸಿಎಂ ನಿವಾಸಗಳಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



