ಬೆಂಗಳೂರು: ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯಿಂದ ಮದ್ದೂರು ಚಲೋವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮದ್ದೂರಿನಲ್ಲಿ ಆಗಿರೋ ಘಟನೆ ಖಂಡನೀಯ. ಎಲ್ಲರೂ ಖಂಡಿಸುತ್ತಾರೆ. ಆದರೆ ಇದಕ್ಕೆ ಕುಮ್ಮಕ್ಕು ಯಾರು ಕೊಟ್ಟಿದ್ದಾರೆ ಅಂತ ಜನರಿಗೆ ಗೊತ್ತಿದೆ. ಅಲ್ಲಿ ಕಲ್ಲು ಎಸೆದರವರು, ಘಟನೆಗೆ ಕಾರಣ ಆಗಿರೋರು ಯಾರು ಅಲ್ಲಿಯವರಲ್ಲ, ಹೊರಗಿನಿಂದ ಬಂದವರು. ಈಗಾಗಲೇ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿ ತನಿಖೆ ಆಗುತ್ತಿದೆ. ಬಿಜೆಪಿಯವರಿಗೆ ಯಾವುದೇ ತನಿಖೆ ಆಗಬಾರದು. ಇವರೇ ನ್ಯಾಯಾಧೀಶರಾಗಿ ತೀರ್ಪು ಕೊಡುತ್ತಾರೆ. ಬಿಜೆಪಿ ಅವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದರು. ಸಾಮರಸ್ಯ ಕಾಪಾಡೋ ಕೆಲಸ ಬಿಜೆಪಿ ಮಾಡಬೇಕು. ಆದರೆ ಸಾಮರಸ್ಯ ಹಾಳು ಮಾಡೋ ಕೆಲಸ ಮಾಡುತ್ತಿದ್ದಾರೆ. ಇಂತಹ ಘಟನೆ ಆದಾಗ ಬಿಜೆಪಿಯವರು ಹದ್ದುಗಳ ತರಹ ಕಾಯುತ್ತಿರುತ್ತಾರೆ. ಇಂತಹ ಘಟನೆ ಬಳಸಿಕೊಂಡು ಸಮಾಜದಲ್ಲಿ ಒಡಕು ಮೂಡಿಸೋಕೆ ಕಾಯುತ್ತಿರುತ್ತಾರೆ. ಹೀಗಾಗಿ ಬಿಜೆಪಿಯವರನ್ನ ಜನ ಗಂಭೀರವಾಗಿ ಪರಿಗಣಿಸಿಲ್ಲ. ಈಗಾಗಲೇ ತನಿಖೆ ಆಗುತ್ತಿದೆ. 22 ಜನರ ಬಂಧನ ಆಗಿದೆ. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಆಗುತ್ತದೆ. ತನಿಖೆ ಬಳಿಕ ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಒಲೈಕೆ ಮಾಡ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಪಸಂಖ್ಯಾತ,ಬಹುಸಂಖ್ಯಾತರು, ದಲಿತರು ಅಂತ ಅಲ್ಲ. ಎಲ್ಲರಿಗೂ ಸಂವಿಧಾನ, ಕಾನೂನು ಅನ್ವಯ ಆಗುತ್ತದೆ. ಬಿಜೆಪಿಯವರಿಗೂ ಸಂವಿಧಾನ, ಕಾನೂನು ಅನ್ವಯ ಆಗುತ್ತದೆ. ಬಿಜೆಪಿಯವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದು ತಿರುಗೇಟು ಕೊಟ್ಟರು. ಮದ್ದೂರು ಗಲಾಟೆ ಪ್ರಕರಣ ನ್ಯಾಯಾಂಗ ತನಿಖೆ ಆಗಬೇಕು ಅಂತ ಆಗ್ರಹ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತಿರುಗೇಟು ಕೊಟ್ಟ ಅವರು, ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ.ಘಟನೆ ಸಬಂಧ ಎಫ್ಐಆರ್ ದಾಖಲಾಗಿದೆ, ಪೊಲೀಸ್ ತನಿಖೆ ಆಗುತ್ತಿದೆ. ಈ ಹಂತದಲ್ಲಿ ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಹಾಗೇನಾದರೂ ಅವಶ್ಯಕತೆ ಇದ್ದರೆ ಸರ್ಕಾರ ಅದನ್ನ ನಿರ್ಧಾರ ಮಾಡುತ್ತಾರೆ. ಆದರೆ ಸರ್ಕಾರ ಅಪರಾಧಿಗಳನ್ನ ಬಂಧನ ಮಾಡಿ ಅವರಿಗೆ ಶಿಕ್ಷೆ ಕೊಡಿಸೋ ಕೆಲಸ ಮಾಡುತ್ತದೆ. ಸದ್ಯ ಈಗ ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಸರ್ಕಾರ ತನಿಖೆಗೆ ಆದೇಶ ಮಾಡುತ್ತಿದೆ. ಪೊಲೀಸ್ ತನಿಖೆ ಆಗಲಿ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







