ಚಿತ್ರದುರ್ಗ : ಹೊಸದುರ್ಗ ತಾಲ್ಲೂಕಿನ ದೊಡ್ಡಘಟ್ಟ, ಜಂತಿಕೊಳಲು, ಚಳ್ಳಕೆರೆ ತಾಲ್ಲೂಕಿನ ಬೂದಿಹಾಳ್, ದೊಡ್ಡಬೀರನಹಳ್ಳಿ,ಕೋನಿಗರಹಳ್ಳಿ, ಹಿರಿಯೂರು ತಾಲ್ಲೂಕಿನ ಈಶ್ವರಗೆರೆ, ಕಂಬತ್ತಹಳ್ಳಿ ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲವು ವರ್ಷಗಳಿಂದ ದಲಿತರಮೇಲೆ ದೌರ್ಜನ್ಯ, ಬಹಿಷ್ಕಾರ ನಡೆಯುತ್ತಿದ್ದು, ಸರ್ಕಾರದಿಂದ ಇದುವರೆವಿಗೂ ಯಾವುದೇ ಪರಿಹಾರ ನೀಡಿಲ್ಲದಿರುವುದನ್ನುವಿರೋಧಿಸಿ ಮಾದಿಗ ಮಹಾಸಭಾದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ದೌರ್ಜನ್ಯಕ್ಕೊಳಗಾದವರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಜಮೀನು ಉಳ್ಳವರಿಗೆ ಕೊಳವೆಬಾವಿಗಳನ್ನು ಕೊರೆಸಿಕೊಡುವಂತೆ ಅನೇಕವರ್ಷಗಳಿಂದಲೂ ಹೋರಾಟ ನಡೆಯುತ್ತಿದೆ. ನಿವೇಶನ, ಮನೆ, ಜಮೀನು ಮಂಜೂರು ಮಾಡುವಂತೆ ಸರ್ಕಾರವನ್ನು
ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಸಂತ್ರಸ್ಥರಿಗೆ ಇಲ್ಲಿಯವರೆಗೂ ಪರಿಹಾರದ ಹಣ ಮಂಜೂರಾಗಿಲ್ಲ.
ತಕ್ಷಣವೆ ಮೂಲಭೂತಸೌಲಭ್ಯಗಳನ್ನು ಒದಗಿಸಬೇಕೆಂದು ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ ಜಿಲ್ಲಾಧಿಕಾರಿಯನ್ನುಒತ್ತಾಯಿಸಿದರು.ದಲಿತರ ಮೇಲೆ ದೌರ್ಜನ್ಯವೆಸಗಿರುವವರಿಗೆ ನ್ಯಾಯಾಲಯ ಬೇಗನೆ ಜಾಮೀನು ನೀಡಬಾರದು. ಕನಿಷ್ಟ ಮೂರು ತಿಂಗಳಾದರೂನ್ಯಾಯಾಂಗ ಬಂಧನದಲ್ಲಿರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರಿಅಭಿಯೋಜಕರು ಸಂತ್ರಸ್ಥರ ಪರ ವಾದ ಮಂಡಿಸಬೇಕೆಂದು ವಿನಂತಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



