ಮೈಸೂರು, ಜು.04:ಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು. ಅವರು ನಮಗೆ ಬುದ್ಧಿವಾದ ಹೇಳಿದ್ದಾರೆ, ಸಂದೇಶ ನೀಡಿದ್ದಾರೆ. ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ದೇವಿಯ ದರ್ಶನ ಪಡೆದ ನಂತರ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ರೇಸ್ ನಿಂದ ನೀವು ಹೊರಬಿದ್ದಿದ್ದೀರಾ ಎಂದು ಪ್ರಶ್ನಿಸಿದಾಗ, “ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಬಂದಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಂದಿದ್ದೇನೆ” ಎಂದು ತಿಳಿಸಿದರು.
ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ” ಎಂದರು.
ನಿಮ್ಮ ಪ್ರಾರ್ಥನೆಗೆ ಭಗವಂತ ಫಲ ನೀಡುವ ದಿನಗಳು ಹತ್ತಿರ ಬಂದಿವೆಯೇ ಎಂದು ಕೇಳಿದಾಗ, “ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ” ಎಂದು ಮಾರ್ಮಿಕವಾಗಿ ನುಡಿದರು.
ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ಈ ವರ್ಷ ನಾಡದೇವಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿದೆ. ಈ ವರ್ಷ ಉತ್ತಮ ಮಳೆ, ನೆಮ್ಮದಿ, ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಎನ್ನುವುದು ನನ್ನ ನಂಬಿಕೆ” ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



