ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅರ್ಹ ವ್ಯಕ್ತಿ ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿಲ್ಲ ಎಂದು ಖರ್ಗೆಯವರು ಬೇರೆಯವರಿಗೆ ಉದಾಹರಣೆ ನೀಡಲು ಹೇಳಿದ್ದಾರೆ. ಇಂತಹ ಅವಕಾಶ ತಪ್ಪಿದರೂ ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಅದನ್ನು ಯಾವ ರೀತಿಯಲ್ಲಿ ಬೇಕಾದರೂ ಅರ್ಥೈಸಿಕೊಳ್ಳಬಹುದು. ನನ್ನ ಪ್ರಕಾರ, ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎನ್ನುವ ರೀತಿಯಲ್ಲಿ ಖರ್ಗೆ ಸಾಹೇಬ್ರು ಹೇಳಿದ್ದು ಎಂದು ಹೇಳಿದರು.ಮುಖ್ಯಮಂತ್ರಿ ಹುದ್ದೆಗೆ ನನ್ನ ಪ್ರಕಾರ ಮಲ್ಲಿಕಾರ್ಜುನ ಖರ್ಗೆಯವರು ಅತ್ಯಂತ ಅರ್ಹ ವ್ಯಕ್ತಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಖರ್ಗೆ ಸಾಹೇಬ್ರು ನಡೆದುಕೊಂಡು ಬಂದಂತಹ ದಾರಿ, ಅವರು ಪಕ್ಷಕ್ಕೆ ತೋರಿಸಿರುವ ನಿಷ್ಠೆ, ಇಡೀ ಭಾರತ ದೇಶದಲ್ಲಿ ಅವರಂತಹ ಇನ್ನೋರ್ವ ವ್ಯಕ್ತಿ ಸಿಗಲಾರರು.
2004ರಲ್ಲಿ ಅವರ ಜೊತೆಗೆ ತಿರುಗಾಡುವ ಅವಕಾಶ ಸಿಕ್ಕಿತ್ತು, ಬೆಳಗಾವಿಯಲ್ಲಿ ಮೊದಲ ಬಾರಿಗೆ ಅಧಿವೇಶನ ನಡೆದಿತ್ತು. ರಾತ್ರಿ 10 ಗಂಟೆಯಾದರೂ ಅವರು ಸದನದಲ್ಲಿ ಇರುತ್ತಿದ್ದರು. ಸದನದಲ್ಲಿ ಸುಮ್ಮನೆ ಅವರು ಕಾಟಾಚಾರಕ್ಕೆ ತಮ್ಮನ್ನು ತೊಡಗಿಸಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದರು,ಮಹಾದಾಯಿ ವಿವಾದದ ಕುರಿತು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಅಧಿಕಾರದಲ್ಲಿದ್ದರೂ ಮಹಾದಾಯಿ ನದಿ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಕೇಂದ್ರ ಸರ್ಕಾರ ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಈಗ, ಟೆಂಡರ್‌ಗಳನ್ನು ನೀಡಲಾಗಿರುವುದರಿಂದ ಸಿಎಂ ಕೆಲಸ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ, ಯೋಜನೆ ಪ್ರಾರಂಭವಾಗಿದೆ ಎಂದು ಹೇಳಿಕೊಂಡು ಸಿಹಿತಿಂಡಿಗಳನ್ನು ವಿತರಿಸಿತು. ಈಗೇಕೆ ಯೋಜನೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಇದಕ್ಕೆ ಉತ್ತರಿಸಲಿ ಎಂದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



