ಚಿತ್ರದುರ್ಗ :ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಗ್ರಾಮ, ಹೋಬಳಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್, ಡಾ.ಜಗಜೀವನ ರಾಂ ಹಾಗೂ ಸೇವಲಾಲ್ ಭವನಗಳನ್ನು ನಿರ್ವಹಣೆ ಮಾಡಲು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಸರ್ಕಾರ ನಿಗದಿ ಪಡಿಸಿದ ಮೊತ್ತದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ 3 ಜನ ನಾಮನಿರ್ದೇಶಿತ ಸಮಿತಿ ಭವನಗಳ ನಿರ್ವಹಣೆ ಮಾಡಲಿದೆ. ಪರಿಶಿಷ್ಟ ಜಾತಿಗೆ ಸೇರಿದ ಗಣ್ಯರು ಅರ್ಜಿ ಸಲ್ಲಿಸಬಹುದು.ಆಸಕ್ತರು ಜಾತಿ ಪ್ರಮಾಣ ಪತ್ರ, ಆಧಾರ್ ಪ್ರತಿ, ಗುರುತಿನ ಚೀಟಿ, ಸಂಬಂಧಪಟ್ಟ ಗ್ರಾಮದ ಪಿಡಿಓ ಅವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಇತ್ತೀಚಿನ 2 ಭಾವಚಿತ್ರ, ಪರಿಶಿಷ್ಟ ಜಾತಿ ಜನಾಂಗ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಕುರಿತ ಪ್ರಸಂಶನಾ ಪತ್ರಗಳೊಂದಿಗೆ ಸೆಪ್ಟೆಂಬರ್ 3 ರ ಒಳಗೆ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.






