ರಾಯಚೂರು: ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ರಾಜ್ಯದಿಂದಲೇ ಅಧಿಕ ಭಕ್ತರು ಆಗಮಿಸುತ್ತಾರೆ. ಅವರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರಡ್ಡಿ ತಿಳಿಸಿದರು. ಮಂತ್ರಾಲಯಕ್ಕೆ ಆಗಮಿಸಿದ ಸಚಿವರು ಗ್ರಾಮದೇವಿ ಮಂಚಾಲಮ್ಮಗೆ ಪೂಜೆ ಸಲ್ಲಿಸಿ, ನಂತರ ಗುರುರಾಯರ ಮೂಲಬೃಂದಾವನದ ದರ್ಶದ ಪಡೆದರು. ಈ ವೇಳೆ, ಮಠದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿದರು. ಬಳಿಕ, ಶ್ರೀಗಳು ಸಚಿವರಿಗೆ ನೆನಪಿನ ಕಾಣಿಕೆ, ಫಲ-ಮಂತ್ರಾಕ್ಷತೆ ವಿತರಿಸಿ, ಸನ್ಮಾನಿಸಿ, ಆಶೀರ್ವದಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



