ಮೊಳಕಾಲ್ಮೂರು: ನನಗೆ ಮದುವೆ ಆಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಹೋಮ್ ಗಾರ್ಡ್ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಜಹಗೀರ್ ಬುಡೆರಾ ಹಳ್ಳಿಯಲ್ಲಿ ನಡೆದಿದೆ. ಸುಮಾರು 33 ವರ್ಷದ ತಿರುಮಲ ಎಂಬಾತ ಸುಮಾರು ವರ್ಷಗಳಿಂದ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನನಗೆ ವಯಸ್ಸಾಗುತ್ತಿದೆ ಆದರೂ ಹೆಣ್ಣು ಆಗುತ್ತಿಲ್ಲ, ನಾನು ಬದುಕಿದ್ದು ಏನು ಮಾಡೋದು ಎಂದು ಹಲವಾರು ಬಾರಿ ಮನೆಯವರ ಬಳಿ ನೋವು ಹೇಳಿಕೊಂಡಿದ್ದ, ಆ ವೇಳೆ ಮನೆಯವರು ಹೆಣ್ಣು ಹುಡುಕಿ ಮದುವೆ ಮಾಡುತ್ತೇವೆ ಎಂದು ಹೇಳಿ ಸಮಾಧಾನ ಮಾಡಿದ್ದರು. ಆದರೂ ತಿರುಮಲ ಮದುವೆ ವಿಚಾರವಾಗಿ ಯೋಚಿಸಿ ಮಾನಸಿಕವಾಗಿ ನೊಂದಿದ್ದ ಎಂದು ಹೇಳಾಗುತ್ತಿದೆ. ದಿನನಿತ್ಯದಂತೆ ಮನೆಯವರ ಜೊತೆ ಊಟ ಮಾಡಿ ತನ್ನ ರೂಮ್ ಗೆ ಹೋಗಿದ್ದಾನೆ. ಬಳಿಕ ರೂಂನಲ್ಲಿದ್ದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



