ಹೈದರಾಬಾದ್: ರೇಣು ದೇಸಾಯಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರಿಂದ ಬೇರ್ಪಟ್ಟು ಸುಮಾರು 13 ವರ್ಷಗಳಾಗಿವೆ. ಎರಡನೇ ಮದುವೆಯಾಗದೆ ಅವರು ಇನ್ನೂ ಒಂಟಿಯಾಗಿದ್ದಾರೆ. ಅವರು ತಮ್ಮ ಮಗ ಅಕಿರಾ ನಂದನ್ ಮತ್ತು ಮಗಳು ಆಧ್ಯಾಳನ್ನು ನೋಡಿಕೊಳ್ಳುತ್ತಾ ಒಂಟಿ ಜೀವನ ನಡೆಸುತ್ತಿದ್ದಾರೆ. ಆದರೆ, ಅವರು ತಮ್ಮ ಎರಡನೇ ಮದುವೆಗೆ ಸಂಬಂಧಿಸಿದಂತೆ ಆಗಾಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಇದಕ್ಕೆ ಸ್ಪಷ್ಟೀಕರಣ ನೀಡಿದರು. ನಟಿ ತಾವು ಎರಡನೇ ಬಾರಿಗೆ ಯಾವಾಗ ಮದುವೆಯಾಗುತ್ತಾರೆ ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ರೇಣು ದೇಸಾಯಿ ʼಎರಡನೇ ಮದುವೆಯಾಗಲು ಸಿದ್ಧಳಾಗಿದ್ದೇನೆ.. ಆದರೆ ಇಲ್ಲಿ ಒಂದು ಸಣ್ಣ ತಿರುವು ಇದೆ. ಮದುವೆಯಾಗಲು ಇನ್ನೂ ಕೆಲವು ದಿನ ಬೇಕು..ʼ ಎಂದಿದ್ದಾರೆ.. ಮುಂದಿನ ಎರಡು ಮೂರು ವರ್ಷಗಳಲ್ಲಿ ಖಂಡಿತವಾಗಿಯೂ ಮದುವೆಯಾಗುವುದಾಗಿ ರೇಣು ದೇಸಾಯಿ ಸ್ಪಷ್ಟಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



