ಬೆಂಗಳೂರು: ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ)ವಿಧೇಯಕವನ್ನುಅಂಗೀಕರಿಸಲಾಯಿತು. ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ವಿಧೇಯಕವನ್ನು ಮಂಡಿಸಿ, ರಾಷ್ಟ್ರದಲ್ಲಿ ಆರ್ಥಿಕ ಸುಧಾರಣೆಗಳನ್ನು ಮುನ್ನಡೆಸಿದ ಹಾಗೂ ಸತತವಾಗಿ ಎರಡು ಅವಧಿಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಪ್ರಸಿದ್ಧ ಅರ್ಥಶಾಸ್ತ್ರಜ್ಣ, ಶಿಕ್ಷಣ ತಜ್ಣ, ನಿಯಮನಿಷ್ಟ ಅಧಿಕಾರಿ ಮತ್ತು ರಾಜ್ಯನೀತಿಜ್ಣ “ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ” ಎಂದು ಮರುನಾಮಕರಣ ಮಾಡಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದರು.ನಂತರ ಸದಸ್ಯರುಗಳು ವಿಧೇಯಕದ ಬಗ್ಗೆ ಚರ್ಚೆ ನಡೆಸಿದ ನಂತರ ವಿಧೇಯಕಕ್ಕೆ ಅನುಮೋದನೆ ದೊರೆಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







