ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನು ಷ್ಠಾನಕ್ಕೆ ಸಲ್ಲಿಸಲಾಗಿರುವ ಪ್ರಸ್ಥಾವನೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ.ಲೋಕಸಭೆ ನಡೆಯುತ್ತಿರುವುದರ ಅಧಿವೇಶನ ನಡುವೆಯೇ ಬುಧವಾರ ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ ಪ್ರಸ್ತಾವನೆಗಳಿಗೆ ತುರ್ತು ಅನುಮೋದನೆಯ ಅಗತ್ಯತೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ- 150ಎ ಚಳ್ಳಕೆರೆ ನಗರದ ಒಳಭಾಗದಲ್ಲಿ ಹಾದುಹೋಗುತ್ತಿದೆ. ಚಳ್ಳಕೆರೆ ಪಟ್ಟಣದ ವ್ಯಾಪ್ತಿಯಲ್ಲಿ ಸುಮಾರು 9 ಕಿಮೀ ಹೆದ್ದಾರಿಯನ್ನು ಒನ್ ಟೈಮ್ ಇಪ್ರುಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿ-48 ಹಾಗೂ 150-ಎ ಹೆದ್ದಾರಿಗಳು ಹಿರಿಯೂರು ನಗರದಹೊರಭಾಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡುವುದು, ಭಾರತ್ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಚಳ್ಳಕೆರೆ ಹಿರಿಯೂರು ಮಧ್ಯದ ಹೆದ್ದಾರಿಯಲ್ಲಿ ಉದ್ಭವಿಸಿರುವ ಹಲವಾರು ಗ್ರಾಮಗಳಸಮಸ್ಯೆ ಪರಿಹರಿಸ ಬೇಕು. ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಶಿರಾ ತಾಲೂಕು ಚಿಕ್ಕನಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗಿರುವ ಕೆಳ ಸೇತುವೆಯ ಅವೈಜ್ಞಾನಿಕತೆ ಸರಿಪಡಿಸಬೇಕು, ಹಿರಿಯೂರು ತಾಲೂಕು ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು. ಶಿರಾ ಪಟ್ಟಣದಲ್ಲಿ ಬಾಕಿ ಉಳಿದಿರುವ3.90 ಕಿಮೀಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸುವುದು, ರಾಷ್ಟ್ರೀಯ ಹೆದ್ದಾರಿ-173 ನ್ನು ಹೊಳಲ್ಕೆರೆ ಪಟ್ಟಣದಿಂದ ದಾವಣಗೆರೆ ತಾಲೂಕು ಆನಗೋಡುಬಳಿ ರಾಷ್ಟ್ರೀಯಹೆದ್ದಾರಿ-48 ರವರೆಗೆ ವಿಸ್ತರಿಸುವಂತೆ ಕೇಂದ್ರ ಸಚಿವರಿಗೆ ಸಲ್ಲಿಸಲಾದ ಕೋರಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



