ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ ಮತ್ತು ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಐದನೇ ಸುತ್ತಿನ ಸೀಟುಗಳನ್ನು ಸೋಮವಾರ ಹಂಚಿಕೆ ಮಾಡಲಾಯಿತು.ಕ್ರೈಸ್ ವಸತಿ ಶಾಲೆಗಳ ಆಡಳಿತಾಧಿಕಾರಿ ಹಾಗೂ ಚಿತ್ರದುರ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು, ವಿದ್ಯಾರ್ಥಿಗಳಿಗೆ ದಾಖಲಾತಿ ಆದೇಶದೊಂದಿಗೆ ಗುಲಾಬಿ ಹೂವು ನೀಡಿ ಶುಭ ಹಾರೈಸಿದರು.
ಸರ್ಕಾರವು ಎಲ್ಲ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ಆರ್.ರಮೇಶ್, ತಾಲ್ಲೂಕು ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ, ಮಂಜಣ್ಣ, ದೇವಲ ನಾಯಕ್, ಪ್ರಾಂಶುಪಾಲರಾದ ನಾಗರಾಜ್, ಮಹೇಶ್, ಅಂಗಡಿ ಪ್ರಕಾಶ್, ಮಂಜುನಾಥ್ ರೆಡ್ಡಿ ಸೇರಿದಂತೆ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



