ಚಿತ್ರದುರ್ಗ : ಸಾಮಾಜಿಕ ಸಂಘರ್ಷ ಸಮಿತಿ-ಚಿತ್ರದುರ್ಗ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಒಕ್ಕೂಟ ತುಮಕೂರುಸಹಯೋಗದೊಂದಿಗೆ ಜು.6 ರಂದು ಬೆಳಿಗ್ಗೆ 11 ಗಂಟೆಗೆ ವಿಜ್ಞಾನ ಕಾಲೇಜು ಎದುರು ಆದಿ ಕರ್ನಾಟಕ ಹಾಸ್ಟೆಲ್‍ನಲ್ಲಿಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನ ಧೃವಿಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ ಆಚರಿಸಲಾಗುವುದು.
ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಸಿ.ಚಂದ್ರಶೇಖರ್ ಜನ್ಮದಿನ ಉದ್ಗಾಟಿಸುವರು.
ಸಾಮಾಜಿಕ ಸಂಘರ್ಷ ಸಮಿತಿ ಅಧ್ಯಕ್ಷ ಕೆ.ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಎಸ್.ಮಾರೆಪ್ಪ,ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಡಿ.ದುರುಗೇಶಪ್ಪ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಹಿರೇಹಳ್ಳಿಮಲ್ಲಿಕಾರ್ಜುನ್, ಉಪಾಧ್ಯಕ್ಷ ಬಸವನಾಳ್, ಸೂಳ್ಯಾ ಜಿಲ್ಲೆ ಅರಣ್ಯಾಧಿಕಾರಿ ನಂದಗೋಪಾಲ್, ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಸಾಹಿತಿ ದು.ಸರಸ್ವತಿ, ಶಂಕರ್, ನಿವೃತ್ತ ಪ್ರಾಚಾರ್ಯರಾದ ವಿ.ಬಸವರಾಜ್, ಎಂ.ಡಿ.ರವಿ,ಇಮ್ತಿಯಾಜ್ ಹುಸೇನ್ ಇನ್ನು ಅನೇಕರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವತಿಯಿಂದ ಬನ್ನೇರುಘಟ್ಟ ಪ್ರಕೃತಿ ಶಿಬಿರದಲ್ಲಿ ಎರಡು ದಿನಗಳ ಕಾಲನಡೆದ ಪ್ರಧಾನ ಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಸದಸ್ಯರ ತರಬೇತಿಯಲ್ಲಿ ಭಾಗವಹಿಸಿದ್ದ ಚಿತ್ರದುರ್ಗದ ಸೈಯದ್ ಅಫಾಖ್ ಅಹಮದ್‍ಗೆ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಪ್ರಮಾಣ ಪತ್ರ ವಿತರಿಸಿದರು. ಕಾರ್ಯದರ್ಶಿ ಡಾ.ಮಾಜುದ್ದಿನ್‍ಖಾನ್ ಈ ಸಂದರ್ಭದಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



