ವಿಧಾನ ಪರಿಷತ್ತು ಸರ್ಕಾರಿ ಕೋಟಾ ಸೀಟು ಪಡೆದು ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಯಮಾನುಸಾರ 1 ವರ್ಷ ಕಡ್ಡಾಯ ಸೇವೆ ನಿರ್ವಹಿಸುವ ವೈದ್ಯರ ವೇತನ ಪರಿಷ್ಕರ ಣೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು1 ವರ್ಷ ಕಡ್ಡಾಯ ಸೇವೆ ಸಲ್ಲಿಸಬೇಕಿರುವ ವೈದ್ಯರನ್ನು ಗ್ರಾಮೀಣ ಆಸ್ಪತ್ರೆಗಳಿಗೆ ನಿಯೋಜಿಸಿ ಹೆಚ್ಚುವರಿಯಾದವರನ್ನು ನಗರಗಳಲ್ಲಿ ನಿಯೋಜಿಸುವ, ತಜ್ಞರನ್ನು ಗ್ರಾಮೀಣ ಭಾಗಕ್ಕೆ ಕಳಿಸುವ ಸಂಬಂಧದ ಕರ್ನಾಟಕ ವೈದ್ಯಕೀಯ ಕೋರ್ಸು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ- 2025ಕ್ಕೆ ಬುಧವಾರ ವಿಧಾನ ಪರಿಷತ್ ನಲ್ಲೂ ಅಂಗೀಕಾರ ಸಿಕ್ಕಿತು.ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿಯ ಡಾ.ಧನಂಜಯ ಸರ್ಜಿ, ಕೇಶವ ಪ್ರಸಾದ್ ಮತ್ತಿತರರು ಕಡ್ಡಾಯ ಸೇವೆಗೆ ಬರುವ ವೈದ್ಯರ ವೇತನ ಕಡಿಮೆ ಇದ್ದು, ಪರಿಷ್ಕರಿಸುವಂತೆ ಕೋರಿದರು. ಆಗ ಸಚಿವರು, ಅದನ್ನು ಕನಿಷ್ಠ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವ ವೈದ್ಯರ ವೇತನಕ್ಕೆ ಸಮನಾಗಿ ಹೆಚ್ಚಿಸುವ ಪ್ರಯತ್ನ ನಡೆದಿದ್ದು, ಈ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







