ಹಿರಿಯ ನಟ ಅನಂತ್ ನಾಗ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಗಮನಿಸಿ ಕೇಂದ್ರ ಸರ್ಕಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಈಗ ಬೆಂಗಳೂರಿನಲ್ಲಿ ನಡೆದ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನಿಸಿದ್ದಾರೆ.ಅನಂತ್ ನಾಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1973ರಲ್ಲಿ. ‘ಸಂಕಲ್ಪ’ ಅವರ ನಟನೆಯ ಮೊದಲ ಚಿತ್ರ. ಅವರು ಬಣ್ಣದ ಲೋಕದಲ್ಲಿ ಕಳೆದ 52 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಹಾಸ್ಯ, ಗಂಭೀರ, ಹಾರರ್ ಸೇರಿದಂತೆ ವಿಭಿನ್ನ ಕಥಾ ಹಂದರಗಳ ಸಿನಿಮಾಗಳಲ್ಲಿ ಅನಂತ್ ಕಾಣಿಸಿಕೊಂಡಿದ್ದಾರೆ. ಅವರಿಗೆ ಜೋಶಿ ವಿಶೇಷ ಗೌರವ ಸಲ್ಲಿಕೆ ಮಾಡಿದ್ದಾರೆ.
ಅನಂತ್ ನಾಗ್ ಅವರನ್ನು ಸನ್ಮಾನಿಸಿದ ಬಳಿಕ ಮಾತನಾಡಿದ ಜೋಶಿ ಅವರು, ‘75ನೇ ವಯಸ್ಸಿನಲ್ಲೂ ಅನಂತ್ ನಾಗ್ ಕ್ರಿಯಾಶೀಲರಾಗಿದ್ದಾರೆ. ಅವರು ಅತ್ಯುತ್ತಮ ನಟನೆಯ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಎಲ್ಲರನ್ನೂ ಅವರು ರಂಜಿಸಿದ್ದಾರೆ’ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಅನಂತ್ ನಾಗ್ ಪತ್ನಿ ಧರ್ಮಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.ಅನಂತ್ನಾಗ್ ಅವರಿಗೆ ಈ ಮೊದಲು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ್ದ ಅವರು, ‘ಪದ್ಮ ಪ್ರಶಸ್ತಿ ಬಂದಿದೆ ಎಂಬುದಕ್ಕಿಂತಲೂ ನೀವೆಲ್ಲರೂ ಸೇರಿ ನನಗೆ ಕೊಡಿಸಿದ್ದೀರಿ, ಅವರು ಕೊಟ್ಟಿದ್ದಾರೆ, ನಾನು ತೆಗೆದುಕೊಂಡು ಬಂದಿದ್ದೇನೆ’ ಎಂದಿದ್ದರು. ಅನಂತ್ ನಾಗ್ ಅವರಿಗೆ ಈ ಗೌರವ ಸಲ್ಲಬೇಕು ಎಂದು ಕನ್ನಡಿಗರು ಹಲವು ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







