ಹೊಳಲ್ಕೆರೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆಯೆಂದು ಕೈಕಟ್ಟಿ ಸುಮ್ಮನೆ ಕೂತಿಲ್ಲ. ಹೋರಾಟ ಮಾಡಿ ಹಣ ತಂದು ಕ್ಷೇತ್ರದಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಗೂಳಿಹೊಸಹಳ್ಳಿ ಗ್ರಾಮದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ನೂತನ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ತಾಲ್ಲೂಕಿನಾದ್ಯಂತ ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಇಷ್ಟು ಸಾಲದೆಂಬಂತೆ ಚಿಕ್ಕಜಾಜೂರಿನ ಕೋಟೆಹಾಳ್ಬಳಿ ಐದುನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ವಿದ್ಯುತ್ ಸಮಸ್ಯೆಯಿರುವುದಿಲ್ಲ ಎಂದರು.
ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ನೀರಿನ ಮಧ್ಯೆ 40 ಅಡಿ ಆಳದಲ್ಲಿ ಪಿಲ್ಲರ್ ಎತ್ತಿ ಸ್ಟೇಜ್ ಕಟ್ಟಿ ಮೋಟಾರ್ ಕೂರಿಸಿ ಫಿಲ್ಟರ್ಅಳವಡಿಸಲಾಗಿದೆ. ಪೈಪ್‍ಲೈನ್ ಅಳವಡಿಕೆ ಕಾರ್ಯ ಮುಗಿದಿದೆ. ನಾಲ್ಕು ನೂರರಿಂದ ಐದುನೂರು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ.ಹೊಸದಾಗಿ ಬಂದು ನಾಟಕ, ಡ್ರಾಮ ಮಾಡುವವನಲ್ಲ. ಚುನಾವಣೆ ದಿನ ಗಿಮಿಕ್ ಮಾಡುವ ರಾಜಕಾರಣಿ ನಾನಲ್ಲ.493 ಹಳ್ಳಿಗಳಲ್ಲಿ ಜನ ಯಾರು ಕಷ್ಟ ಪಡಬಾರದೆಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತ ಮನುಷ್ಯತ್ವವಿಟ್ಟುಕೊಂಡುಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಹತ್ತು ಕೋಟಿ ರೂ.ವೆಚ್ಚದಲ್ಲಿ ಸ್ಟೇಡಿಯಂ, ಎರಡು ಕೋಟಿ ರೂ.ವೆಚ್ಚದಲ್ಲಿ ಈಜುಕೊಳ, ಹನ್ನೆರಡು ಕೋಟಿ ರೂ.ನಲ್ಲಿಹೈಟೆಕ್ ಆಸ್ಪತ್ರೆಕಟ್ಟಿಸಿದ್ದೇನೆ. ಹೈಸ್ಕೂಲ್, ಪದವಿಪೂರ್ವ ಕಾಲೇಜು, ಡಿಗ್ರಿ ಕಾಲೇಜು, ವಸತಿ ಶಾಲೆಗಳು, ಎಲ್ಲಾ ಕಡೆ ಸಿ.ಸಿ.ರಸ್ತೆಗಳನಿರ್ಮಾಣವಾಗಿದೆ. ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಉಚಿತ ಬಸ್‍ಗಳನ್ನು ಬಿಟ್ಟುಡ್ರೈವರ್, ಕಂಡಕ್ಟರ್‍ಗೆ ಸಂಬಳ ಕೊಡುತ್ತಿದ್ದೇನೆ. ರಾಜ್ಯದಲ್ಲಿ ಯಾವ ಶಾಸಕನು ಇಂತಹ ಕೆಲಸ ಮಾಡಿಲ್ಲ. ಚುನಾವಣೆಯಲ್ಲಿ ಮತಹಾಕುವುದು ಒಂದು ನಿಮಿಷದ ಕೆಲಸ. ಯಾರು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆನ್ನುವುದನ್ನು ಆಲೋಚಿಸಿ ಮತ ನೀಡಿ ಎಂದುಶಾಸಕ ಡಾ.ಎಂ.ಚಂದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.
ಚಂದ್ರಣ್ಣ, ದ್ಯಾಮಪ್ಪ, ರಾಮಜ್ಜ, ಪ್ರವೀಣ್, ಅಂಳಪ್ಪ, ಚಂದ್ರಣ್ಣ, ಸುರೇಶ್, ಈಶ್ವರಣ್ಣ, ರಾಜಣ್ಣ, ತಿಪ್ಪೇಸ್ವಾಮಿ, ಸಣ್ಣ ನೀರಾವರಿಇಲಾಖೆ ಇಂಜಿನಿಯರ್ ನವೀನ್ ಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



