ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿ ಸೋಮವಾರ ಅಂತ್ಯವಾಗಲಿದೆ.16 ದಿನಗಳಿಂದ ಇ.ಡಿ ವಶದಲ್ಲಿರುವ ವೀರೇಂದ್ರ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ದಾಳಿ ವೇಳೆ ಜಪ್ತಿ ಮಾಡಲಾದ ಭಾರೀ ಪ್ರಮಾಣದ ಹಣ, ಚಿನ್ನಾಭರಣ, ಆಸ್ತಿ ದಾಖಲೆಗಳು, ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ವ್ಯವಹಾರ ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಹೇಳಿಕೆ ದಾಖಲಿಸಿದ್ದಾರೆ.ಕಸ್ಟಡಿ ಅವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯೊಳಗೆ ವೀರೇಂದ್ರರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ತನಿಖೆ ವೇಳೆ ಕೆದಕಿದಷ್ಟು ಅಕ್ರಮಗಳು ತೆರೆದುಕೊಳ್ಳುತ್ತಿರುವುದರಿಂದ ಆರೋಪಿಯ ಹೆಚ್ಚಿನ ವಿಚಾರಣೆ ಸಂಬಂಧ ಮತ್ತೆ ಕೆಲ ದಿನ ತಮ್ಮ ವಶಕ್ಕೆ ನೀಡುವಂತೆ ಇ.ಡಿ. ಅಧಿಕಾರಿಗಳು ಮನವಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಇ.ಡಿ. ಅಧಿಕಾರಿಗಳು ಆ.22ರಂದು ಕೆ.ಸಿ.ವೀರೇಂದ್ರ, ಆತನ ಸಹೋದರರು ಹಾಗೂ ಪಾಲುದಾರರ ಮನೆಗಳು ಹಾಗೂ ಕಚೇರಿಗಳು ಸೇರಿ 31 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಆ.23ರಂದು ಸಿಕ್ಕಿಂನ ಗ್ಯಾಂಗ್ಟಾಕ್ನಲ್ಲಿ ಕೆ.ಸಿ.ವೀರೇಂದ್ರನನ್ನು ಬಂಧಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







