Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ವಿದ್ಯಾಲಯ»ವಿದ್ಯಾರ್ಥಿಗಳ ಕೈಗೆ ಮೊಬೈಲ್‌; ನಿಷೇಧವೋ..ನಿರ್ಬಂಧವೋ ?
ವಿದ್ಯಾಲಯ

ವಿದ್ಯಾರ್ಥಿಗಳ ಕೈಗೆ ಮೊಬೈಲ್‌; ನಿಷೇಧವೋ..ನಿರ್ಬಂಧವೋ ?

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 24, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ವಿದ್ಯಾರ್ಥಿಗಳ ಕೈಗೆ ಮೊಬೈಲ್‌; ನಿಷೇಧವೋ..ನಿರ್ಬಂಧವೋ ?

ಬೆಂಗಳೂರು: 16 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಕ್ಕಳಿಗೆ ಮೊಬೈಲ್ ಕೊಡದಿದ್ದರೆ ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಮೊಬೈಲ್ ಚಟವು ರೋಗವಾಗಿ ಪರಿವರ್ತನೆಯಾಗುತ್ತಿದೆ. ಸರ್ಕಾರವು ಇದಕ್ಕೆ ನಿಯಂತ್ರಣ ಹೇರಬೇಕು ಎಂದರು.

ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕವು 16 ವರ್ಷದ ಎಲ್ಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿ ಮೊಬೈಲ್ ಬಳಕೆ ನಿಯಂತ್ರಣ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಸಮಿತಿ ರಚಿಸಲಾಗಿದ್ದು, ಅವರಿಂದ ನೆರವು ಪಡೆಯಲಾಗುತ್ತಿದೆ. ಸಂಪೂರ್ಣವಾಗಿ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಬಗ್ಗೆ ಎಲ್ಲರೊಂದಿಗೆ ಕೂಲಂಕಷವಾಗಿ ಚರ್ಚಿಸಿ ಮುಂದಿನ ಅಧಿವೇಶನದ ವೇಳೆಗೆ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕೆಲ ದೇಶಗಳಲ್ಲಿ ಶಾಲೆಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧಿಸಲು ಹೊರಟಿವೆ. 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 2007ರಲ್ಲಿ ಮೊಬೈಲ್ ಬಳಕೆ ನಿಷೇಧ ಕುರಿತು ಕಾಯ್ದೆ ರೂಪಿಸಲಾಗಿತ್ತು. ಆದರೆ ಸಮಗ್ರವಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಮೊಬೈಲ್ ಬಳಕೆ ನಿಷೇಧ ಕುರಿತು ಅನ್ಯ ರಾಷ್ಟ್ರಗಳ ಮಕ್ಕಳ ಆಯೋಗಗಳ ರೂಪಿಸಿರುವ ಮಾರ್ಗಸೂಚಿಗಳ ಬಗ್ಗೆ ಅಧ್ಯಯನ ಮಾಡಲಾಗುವುದು. ಪೋಷಕರೊಂದಿಗೆ ಈ ಬಗ್ಗೆ ಚರ್ಚಿಸಿದ ಬಳಿಕ ಮೊಬೈಲ್‌ ನಿಷೇಧ ಅಥವಾ ನಿರ್ಬಂಧಿಸಬೇಕಾ ಎಂಬುದರ ತೀರ್ಮಾನಿಸಲಾಗುವುದು ಎಂದು ಹೇಳಿದರು.

mobile sutdents ಮಕ್ಕಳಿಗೆ ಮೊಬೈಲ್‌ ವಿದ್ಯಾರ್ಥಿಗಳ
Follow on Facebook Follow on Instagram
Share. Facebook Twitter WhatsApp Telegram
Previous Articleಭದ್ರಾದಲ್ಲಿ ಬ್ಲ್ಯಾಕ್‌ ಪ್ಯಾಂಥರ್; ಜತೆಯಾದ ಚುಕ್ಕಿ ಚಿರತೆ
Next Article ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!

March 22, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

January 28, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.