ಚಳ್ಳಕೆರೆ: ಮೋರಿಗೆ ಬಿದ್ದ ಹಸುವನ್ನು ರಕ್ಷಣೆ ಯುವಕರು ಹಾಗೂ ಪೊಲೀಸರು ಸೇರಿ ರಕ್ಷಣೆ ಮಾಡಿದ ಘಟನೆ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ನಡೆದಿದೆ. ಹಸುವೊಂದು ಆಯತಪ್ಪಿ ರಾಜಕಾಲುವೆಗೆ ಬಿದ್ದು ಒದ್ದಾಡುತ್ತಿತ್ತು. ಇದನ್ನು ಕಂಡ ಪೊಲೀಸ್ ಪೇದೆ ತಿಮ್ಮಣ್ಣ ಯುವಕರ ಜೊತೆಗೂಡಿ ಜೆಸಿಬಿ ಮೂಲಕ ಹಸು ರಕ್ಷಣೆ ಮಾಡಿದ್ದಾರೆ.ಪರುಶುರಾಮಪುರ ಠಾಣೆಯಲ್ಲಿ ತಿಮ್ಮಣ್ಣ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಸು ರಕ್ಷಣೆ ಮಾಡಿದ್ದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



