ದಾವಣಗೆರೆ: 2023ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದೆ ಇದ್ದಕ್ಕೆ ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅಪಾರವಾಗಿ ಶ್ರಮಿಸಿದ್ದಾರೆ. ಅವರು ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂಬುದನ್ನು ನಾನು ಸಾಕ್ಷಿ ಸಮೇತ ಬಹಿರಂಗಪಡಿಸುವೆ ಎಂದರು.
ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಜೊತೆ ಬರಲು ಒಪ್ಪಿದ್ದರು. ಅದರ ಸಂಬಂಧ ಡಿ.ಕೆ ಶಿವಕುಮಾರ್ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ್ ಮನೆ ಬಾಗಿಲಿಗೆ ಬಂದಿದ್ರು. ಆದರೆ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ತಮ್ಮ ನಿಲುವು ಬದಲಿಸಿದರು ಎಂದು ತಿಳಿಸಿದರು. ಇನ್ನು ನಾನು ಕಾನೂನುಬಾಹಿರ ಕೆಲಸ ಮಾಡಿಲ್ಲ. ಬೇಕಾದ್ರೆ ಕಟೀಲು ದುರ್ಗಾ ಪರಮೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧನಿದ್ದೇನೆ ಅವ್ರು ಬೇಕಾದ್ರೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



