ಚಿತ್ರದುರ್ಗ : ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಮಾಜಿ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಮಾಜಿ ಕಾರು ಚಾಲಕ ಯಶವಂತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆ ಮಾಡಿ ಲಿಂಗದಳ್ಳಿ ಬಳಿಯ ಅರಣ್ಯದಲ್ಲಿ ಪ್ರಸನ್ನ ಶವ ಎಸದಿದ್ದರು.
ಪ್ರಸನ್ನ ಪತ್ನಿ ಗಾಯತ್ರಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸನ್ನ ಪತ್ನಿ ಗಾಯತ್ರಿ, ಶಾಸಕ ಗೋವಿಂದಪ್ಪ ಅವರ ಮಾಜಿ ಕಾರು ಚಾಲಕ ಯಶವಂತ್, ಲೋಹಿತ್ ಹಾಗೂ ವೀರೇಶನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



