ಮೈಸೂರು: ಸಿಎಂಯಾಗಿರುವ ಸಿದ್ದರಾಮಯ್ಯಗೆ ನಾನು ಬೆಂಬಲ ನೀಡಲೇಬೇಕು, ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ, ಪ್ರಯತ್ನ ವಿಫಲಾಗಬಹುದು ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಕುಟುಂಬ ಸಮೇತ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತ ನಾಡಿದರು. ಈ ವೇಳೆ, ಮುಖ್ಯಮಂತ್ರಿ ರೇಸ್ ನಿಂದ ಹೊರಬಿದ್ದಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಪ್ರಯತ್ನ ವಿಫಲವಾಗಬಹುದು. ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕು ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದರು.
ಚಾಮುಂಡಿಗೆ 11 ಈಡುಗಾಯಿ ಒಡೆದ ಡಿಕೆಶಿ
ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇವಸ್ಥಾನದ ಮುಂಭಾಗ ಪ್ರಾರ್ಥನೆ ಮಾಡಿಕೊಂಡು 11 ಈಡುಗಾಯಿ ಒಡೆದರು.
ರಾಜಕೀಯದ ಬಗ್ಗೆ ಈಗ ಏನನ್ನೂ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ದಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದಷ್ಟೇ ಹೇಳಿ ನಿರ್ಗಮಿಸಿದರು. ಆದರೆ ಖರ್ಗೆ ನೀಡಿದ ಸಂದೇಶ ಏನು ಎಂಬ ಬಗ್ಗೆ ತಿಳಿಸಲಿಲ್ಲ, ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಅವರು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



