ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡ ಕಲಿಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ ಮತ್ತು ದೇಶದ ಪ್ರತಿಯೊಂದು ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ತಮಗೆ ಆಳವಾದ ಗೌರವವಿದೆ ಎಂದು ಒತ್ತಿ ಹೇಳಿದ್ದಾರೆ.ಇಂದು ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮುರ್ಮು, “ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ನಾನು ಹೇಳಲು ಬಯಸುತ್ತೇನೆ, ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನ್ನ ದೇಶದ ಎಲ್ಲಾ ಭಾಷೆಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ. ಪ್ರತಿಯೊಂದರ ಬಗ್ಗೆಯೂ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು. ಇದಕ್ಕು ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡದಲ್ಲಿ ಭಾಷಣ ಮಾಡಿ, ವೇದಿಕೆಯಲ್ಲಿ ಕುಳಿತಿದ್ದ ಗಣ್ಯರಿಗೆ ನನ್ನ ಭಾಷೆ ಅರ್ಥವಾಗಿದೆಯೇ ಎಂದು ಕೇಳಿದರು.ಪ್ರತಿಯೊಬ್ಬರೂ ತಮ್ಮ ಭಾಷೆಯನ್ನು ಜೀವಂತವಾಗಿಡಲು ಮತ್ತು ಅವರ ಸಂಪ್ರದಾಯಗಳು ಹಾಗೂ ಸಂಸ್ಕೃತಿಯನ್ನು ಸಂರಕ್ಷಿಸಲು ಶ್ರಮಿಸಬೇಕೆಂದು ರಾಷ್ಟ್ರಪತಿಗಳು ಕರೆ ನೀಡಿದರು.ಪ್ರತಿಯೊಬ್ಬರೂ ತಮ್ಮ ಭಾಷೆಯನ್ನು ಜೀವಂತವಾಗಿಡಲು, ಅವರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಮತ್ತು ಆ ದಿಕ್ಕಿನಲ್ಲಿ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಇದಕ್ಕಾಗಿ ನಾನು ಶುಭಾಶಯಗಳನ್ನು ಕೋರುತ್ತೇನೆ ಮತ್ತು ನಾನು ಖಂಡಿತವಾಗಿಯೂ ಕನ್ನಡವನ್ನು ಕ್ರಮೇಣ ಕಲಿಯಲು ಪ್ರಯತ್ನಿಸುತ್ತೇನೆ” ಎಂದು ರಾಷ್ಟ್ರಪತಿಗಳು ನಗುತ್ತಾ ಹೇಳಿದರು.ಇದಕ್ಕೂ ಮುನ್ನ, ಮೈಸೂರು ವಿಮಾನ ನಿಲ್ದಾಣದಲ್ಲಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







