ಮೈಸೂರು: ದಸರಾ ಉತ್ಸವವನ್ನು ಉದ್ಘಾಟಿಸಲು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸಂಬಂಧ ಕರ್ನಾಟಕ ಸರ್ಕಾರದ ನಿರ್ಧಾರ ತೀವ್ರ ಚರ್ಚೆಗೆ ಕಾರಣವಾಗಿದೆ.ಈ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಮೈಸೂರಿನಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ, ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದಾಗ ದಸರಾವನ್ನು ಆಚರಿಸಲಾಗುತ್ತಿತ್ತು. 2017 ರಲ್ಲಿ ಖ್ಯಾತ ಬರಹಗಾರ ಮತ್ತು ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು. ಹಾಗಾದರೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರೇ ವಿವಾದವೇನು..?”ಎಂದುಪ್ರಶ್ನಿಸಿದ್ದಾರೆ.ಮಾಜಿ ರಾಜ್ಯಸಭಾ ಸದಸ್ಯ ಮತ್ತು ಪ್ರಸಿದ್ಧ ಲೇಖಕ ಎಲ್ ಹನುಮಂತಯ್ಯ ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ಇದು ಸಮಾಜಕ್ಕೆ ಹಾನಿಕಾರಕ ಎಂದಿದ್ದಾರೆ. ಮುಷ್ತಾಕ್ಗೆ ಬೆಂಬಲ ವ್ಯಕ್ತಪಡಿಸಿದ ಅವರು, “ಬಾನು ಮುಷ್ತಾಕ್ ನಮ್ಮ ಭೂಮಿಗೆ ಗೌರವ ತಂದಿದೆ. ಕೆಲವರು ದಸರಾ ಆಹ್ವಾನದ ಬಗ್ಗೆ ಅನಗತ್ಯ ವಿವಾದವನ್ನು ಹುಟ್ಟುಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದರು.
ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವಿಗೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ವಾಗತಿಸಿದರು. ಬಾನು ಮುಷ್ತಾಕ್ ಕೃತಿಯನ್ನು ಇಂಗ್ಲಿಷ್ ಗೆ ಭಾಷಾಂತರ ಮಾಡಿದ ದೀಪಾ ಬಸ್ತಿ ಅವರಿಗೂ ಬೂಕರ್ ಪ್ರಶಸ್ತಿ ನೀಡಲಾಗಿದೆ. ಇಬ್ಬರಿಗೂ ಸಮಾನವಾಗಿ ಬೂಕರ್ ಪ್ರಶಸ್ತಿ ನೀಡಲಾಗಿದೆ ಎಂದರು.ಬೂಕರ್ ಬಾನು ಮುಷ್ತಾಕ್ ಅವರಿಗೆ ಬಂದಿದೆ. ಪ್ರತಾಪಿಯಾಗಿ ಮಾತನಾಡುವ ಪ್ರತಾಪ್ ಸಿಂಹ ನೀನು ಬರೆಯುತ್ತಿದ್ದಲ್ಲ ಬೆತ್ತಲೆ ಪ್ರಪಂಚಕ್ಕೆ ಬೂಕರ್ ಬಂತಾ. ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ. ನಿನ್ನ ಪ್ರತಾಪಕ್ಕೆ ಬಿಜೆಪಿ ಹೈಕಮಾಂಡ್ ಸೀಟೇ ಇಲ್ಲದ ಹಾಗೆ ಮಾಡಿದರು ಎಂದು ಮಾಜಿ ಸಂಸದ ಪ್ರತಾಪ್ ಅವರ ವಿರುದ್ಧ ಹರಿಹಾಯ್ದರು. ಮಂತ್ರಿಗಳಾಗಿದ್ದವರೂ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.ಶೋಭಾ ಕರಂದ್ಲಾಜೆ ಭಾರತ ಸರ್ಕಾರದ ಮಂತ್ರಿ. ಇವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತಲು ಬಿಡುವುದಿಲ್ಲ ಎಂದು ಹೇಳುತ್ತಾರೆ. ಚಾಮುಂಡಿ ಬೆಟ್ಟವನ್ನು ನಿಮಗೆ ಯಾರು ಬರೆದುಕೊಟ್ಟವರು..? ಹೀಗೆ ಹೇಳಲು ಅಧಿಕಾರ ಕೊಟ್ಟವರು ಯಾರು .? ಇದು ಜನರ ಪ್ರಭುತ್ವ, ಜಾತಿ-ಪಂಥದ ಶರಾ ಬರೆದಿಲ್ಲ. ಇದು ಎಲ್ಲರ ದಸರಾ ಎಂದು ಹೇಳಿದರು.ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ರಾಜಕಾರಣಿಗಳು ಏನು ಬೇಕಾದರೂ ಹೇಳಿಕೊಳ್ಳಲಿ, ಅವರು ಹೇಳಿದ ಕೂಡಲೇ ಎಲ್ಲವೂ ಆಗುವುದಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು. ಯದುವಂಶದ ಮನೆ ದೇವರು, ಕುಲದೇವಿ ಚಾಮುಂಡಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಪೂಜೆ ನಡೆಯುತ್ತದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







