ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2025ಕ್ಕೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ.ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಈ ಬಾರಿಯೂ 750 ಕೆ.ಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು, ಇಡೀ ತಂಡವನ್ನು ಮುನ್ನಡೆಸಲಿದ್ದಾನೆ. ವಿವಿಧ ಆನೆ ಶಿಬಿರಗಳಿಂದ ಆನೆಗಳನ್ನು ಆಯ್ಕೆ ಮಾಡಿರುವ ಅಧಿಕಾರಿಗಳು ಈಗಾಗಲೇ ಆನೆಗಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಿದ್ದಾರೆ.ಆನೆ ಶಿಬಿರದಲ್ಲಿರುವ ಹೆಣ್ಣು ಆನೆಗಳ ಗರ್ಭಧಾರಣೆ ಪರೀಕ್ಷೆಗಾಗಿ ರಕ್ತಗಳ ಮಾದರಿ ಸಂಗ್ರಹಿಸಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿ ನಂತರ ಈ ಹೆಣ್ಣಾನೆಗಳನ್ನು ದಸರಾಗೆ ಆಯ್ಕೆ ಮಾಡಲಾಗಿದೆ. ನಾಳೆ ಒಂದು ದಿನ ಮೈಸೂರಿನಲ್ಲಿ ವಿಶ್ರಾಂತಿ ಪಡೆಯಲಿರುವ ಗಜಪಡೆ ಆ.7ರಂದು ಅರಮನೆ ಪ್ರವೇಶ ಮಾಡಲಿವೆ.
ಮೊದಲ ತಂಡದ ಆನೆಗಳ ಪಟ್ಟಿ
1. ಅಭಿಮನ್ಯು, ಗಂಡು : 59 ವರ್ಷ
2. ಪ್ರಶಾಂತ, ಗಂಡು : 53 ವರ್ಷ
3. ಧನಂಜಯ, ಗಂಡು : 45 ವರ್ಷ
4. ಮಹೇಂದ್ರ, ಗಂಡು : 42 ವರ್ಷ
5. ಏಕಲವ್ಯ, ಗಂಡು : 40 ವರ್ಷ
6. ಕಂಜನ್, ಗಂಡು : 26 ವರ್ಷ
7. ಭೀಮ, ಗಂಡು : 25 ವರ್ಷ
8. ಲಕ್ಷ್ಮಿ, ಹೆಣ್ಣು : 54 ವರ್ಷ
9. ಕಾವೇರಿ, ಹೆಣ್ಣು : 45 ವರ್ಷ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



