ಮೈಸೂರು: ಇಂದು ಕನ್ನಡ ಚಿತ್ರರಂಗದ ಮೇರು ನಟ, ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವ ಸಿರಿವಂತ ಸಹಾಸಸಿಂಹ ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮ.ವಿಷ್ಣುಸೇನೆ ಇಂದು ಅವರ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಚಿತ್ರದುರ್ಗದ ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ. ಗೌಸ್ ಪೀರ್ ಹಾಗೂ ಅವರ ತಂಡ ಮೈಸೂರಿನಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ನವೆಂಬರ್ ತಿಂಗಳಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮ ಮಾಡಲು ನಿರ್ಧಾರ ಮಾಡಿದ್ದೇವೆ. ನಗರದಲ್ಲಿ ವಿಷ್ಣುವರ್ಧನ್ ಹೆಸರಲ್ಲಿ ಉದ್ಯಾನವನ ಸಹ ಸಿದ್ಧವಾಗಿದೆ. ಅದರ ಸಂಬಂಧವಾಗಿ ಭಾರತಿ ವಿಷ್ಣುವರ್ಧನ್ ಅವರ ಜೊತೆ ಮಾತುಕತೆ ನಡೆಸುವ ಸಲುವಾಗಿ ಮೈಸೂರಿಗೆ ಭೇಟಿ ನೀಡಿ ವಿಷ್ಣು ಅವರ ಸ್ಮಾರಕಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದೇವೆ. ನವೆಂಬರ್ ತಿಂಗಳಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮ ಮಾಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







